ನವದೆಹಲಿ, ಸೆ 29(DaijiworldNews/PY): ಕೃಷಿ ಕಾಯಿದೆಗಳನ್ನು ನಿರ್ಬಂಧಿಸುವ ಸಲುವಾಗಿ ಪರ್ಯಾಯ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಿಗೆ ತಿಳಿಸಿದ್ದಾರೆ.
ಈ ವಿಚಾರವಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್ ಅವರು, ಕೇಂದ್ರ ಸರ್ಕಾರದ ಕೃಷಿ ಕಾನೂನುಗಳಿಗೆ ನಿರ್ಬಂಧ ಹಾಕುವ ಸಾಧ್ಯತೆಗಳ ವಿಚಾರವಾಗಿ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳು ಪರಾಮರ್ಶೆ ಮಾಡಬೇಕು ಎಂದು ತಿಳಿಸಿದ್ದಾರೆ.
ರೈತ ವಿರೋಧಿ ಕಾಯಿದೆಯನ್ನು ರಾಜ್ಯ ಸರ್ಕಾರ ನಿರಾಕರಿಸಲು ಹಾಗೂ ಕೇಂದ್ರ ಸರ್ಕಾರವು ಮಾಡಿದ ಅನ್ಯಾಯದಿಂದ ರೈತರನ್ನು ರಕ್ಷಿಸಲು ಇದು ಅನುವು ಮಾಡಿಕೊಡುತ್ತದೆ ಎಂದಿದ್ದಾರೆ.
ಈ ಕೃಷಿ ಕಾನೂನಿನಲ್ಲಿ, ಕನಿಷ್ಠ ಬೆಂಬಲ ಬೆಲೆ ರದ್ದತಿಯಂತಹ ರೈತ ವಿರೋಧಿ ನೀತಿಗಳಿವೆ. ಈ ನೀತಿಗಳಿಗೆ ನಿರ್ಬಂಧ ವಿಧಿಸಿ ಕಾಂಗ್ರೆಸ್ ಆಡಳಿತ ರಾಜ್ಯದಲ್ಲಿ ರೈತರಿಗೆ ಆಗುತ್ತಿರುವ ಅನ್ಯಾಯವನ್ನು ತಡೆಯಬೇಕು ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.