ನವದೆಹಲಿ, ಸೆ 30(DaijiworldNews/PY): ಅಕ್ಟೋಬರ್ 4ರಂದು ನಡೆಸಲು ತೀರ್ಮಾನಿಸಲಾದ ಕೇಂದ್ರ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಯನ್ನು ಸುಪ್ರೀಂ ಕೋರ್ಟ್ ಮುಂದೂಡಲು ನಿರಾಕರಿಸಿದೆ.
ಕೊರೊನಾ ಕಾರಣದಿಂದ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದೇ ಇದ್ದ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ಕಲ್ಪಿಸುವ ವಿಚಾರವಾಗಿ ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.
ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಗಳ ಸಿದ್ದತೆಗಳಿಗಾಗಿ ಕೇಂದ್ರ ಲೋಕ ಸೇವಾ ಆಯೋಗವು 50 ಕೋಟಿ.ರೂ ವೆಚ್ಚ ಮಾಡಿದೆ ಎಂದು ಕೋರ್ಟ್ಗೆ ಯುಪಿಎಸ್ಸಿ ಅಫಿಡವಿಟ್ ನೀಡಿತ್ತು.
ಈ ನಡುವೆ ಕೊರೊನಾ ಹಿನ್ನೆಲೆ ಈ ಬಾರಿಯ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡುವಂತೆ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಈ ಬಾರಿಯ ಯುಪಿಎಸ್ಸಿ ಪ್ರಿಲಿಮ್ಸ್ ಪರೀಕ್ಷೆಗೆ ಸುಮಾರು ಆರು ಲಕ್ಷ ಅಭ್ಯರ್ಥಿಗಳು ಹಾಜರಾಗುವ ಸಾಧ್ಯತೆ ಇದ್ದು, ದೇಶದ ಸುಮಾರು 72 ನಗರಗಳ ಹಲವು ಕೇಂದ್ರಗಳಲ್ಲಿ ಪರೀಕ್ಷೆಯನ್ನು ನಡೆಸಲಾಗುತ್ತದೆ.