ಲಕ್ನೊ, ಸೆ. 30 (DaijiworldNews/MB) : ಉತ್ತರ ಪ್ರದೇಶದ ಹತ್ರಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಯುಪಿ ಮುಖ್ಯಮಂತ್ರಿ ಆದಿತ್ಯನಾಥ್ಗೆ ಕರೆ ಮಾಡಿ ಸೂಚನೆ ನೀಡಿದ್ದಾರೆ ಎಂದು ವರದಿ ತಿಳಿಸಿದೆ.
ದಲಿತ ಯುವತಿಯ ಮೇಲೆ ನಾಲ್ವರು ಮೇಲ್ಜಾಜಿತ ಯುವಕರು ಸಾಮೂಹಿಕ ಅತ್ಯಾಚಾರ ನಡೆಸಿ ಆಕೆಯ ನಾಲಗೆ ಮೂಳೆಗಳು ತುಂಡಾಗುವಂತೆ ಹಿಂಸಾಚಾರ ನೀಡಿದ್ದು ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಮಂಗಳವಾರ ಕೊನೆಯುಸಿರೆಳೆದಿದ್ದಾಳೆ.
ಸಂತ್ರಸ್ತೆಯ ಅಂತ್ಯಕ್ರಿಯೆಯನ್ನು ಮಂಗಳವಾರ ರಾತ್ರಿ ಪೊಲೀಸರೇ ತರಾತುರಿಯಲ್ಲಿ ನಡೆಸಿ ಸಂತ್ರಸ್ಥೆಯ ಕುಟುಂಬ ಸದಸ್ಯರು ಹಾಗೂ ಸಂಬಂಧಿಕರನ್ನು ಅವರ ಮನೆಯಲ್ಲಿಯೇ ಬಂಧಿಯಾಗಿರಿಸಿದ್ದು ಈ ನಡೆ ದೇಶಾದಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.
ಇನ್ನು ಈಗಾಗಲೇ ಯುಪಿ ಸಿಎಂ ಆದಿತ್ಯನಾಥ್ ಈ ಪ್ರಕಣದ ಎಸ್ಐಟಿ ತನಿಖೆಗೆ ಆದೇಶಿಸಿದ್ದಾರೆ.