ಮುಂಬೈ, ಸೆ 30(DaijiworldNews/PY): ಕಳೆದ ವರ್ಷ ನವೆಂಬರ್ನಲ್ಲಿ ಹೈದರಾಬಾದ್ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆಯಾದಂತೆ ಹತ್ರಸ್ ಅತ್ಯಾಚಾರ ಘಟನೆಗೆ ಸೂಕ್ತವಾದ ನ್ಯಾಯ ಒದಗಿಸಬೇಕು ಎಂದು ನಟಿ ಕಂಗನಾ ರಣಾವತ್ ಒತ್ತಾಯಿಸಿದ್ದಾರೆ.
ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ಯೋಗಿ ಆದಿತ್ಯನಾಥ್ ಅವರ ಮೇಲೆ ನನಗೆ ನಂಬಿಕೆ ಇದೆ. 2019ರ ನವೆಂಬರ್ನಲ್ಲಿ ಹೈದರಾಬಾದ್ನಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಆಕೆಯನ್ನು ಜೀವಂತ ಸುಟ್ಟು ಹಾಕಲಾಗಿತ್ತು. ಅತ್ಯಾಚಾರಿಗಳನ್ನು ಅದೇ ಸ್ಥಳದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಯಿತು. ಇದೇ ರೀತಿಯಾದ ನ್ಯಾಯವನ್ನು ನಾವು ಬಯಸುತ್ತೇವೆ ಎಂದು ಹೇಳಿದ್ದಾರೆ.
ಉತ್ತರ ಪ್ರದೇಶದ ಹತ್ರಸ್ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ 19 ವರ್ಷದ ದಲಿತ ಮಹಿಳೆ ಮಂಗಳವಾರ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.