ನವದೆಹಲಿ, ಅ.01 (DaijiworldNews/HR): ಕೇಂದ್ರ ಸರ್ಕಾರ ಇತ್ತೀಚಿಗೆ ಜಾರಿಗೆ ತಂದಿರುವ ಕೃಷಿ ಮಸೂದೆಯನ್ನು ವಿರೋಧಿಸಿ ಕಾಂಗ್ರೆಸ್ ಪಂಜಾಬಿನಿಂದ 'ಕಿಸಾನ್ ಯಾತ್ರಾ' ಪ್ರತಿಭಟನೆಯನ್ನು ಆಯೋಜಿಸುತ್ತಿದೆ.
ಈ ಬೃಹತ್ ಪ್ರತಿಭಟನೆ ಈ ವಾರದಲ್ಲಿ ಪಂಜಾಬಿನ ಸಾಂಗ್ರೂರ್ ನಿಂದ ಆರಂಭಗೊಳ್ಳಲಿದ್ದು, ನವೆದಹಲಿಯಲ್ಲಿ ಮುಕ್ತಾಯಗೊಳ್ಳಲಿದೆ. ಪಂಜಾಬ್ ಹಾಗೂ ಹರಿಯಾಣದ ವಿವಿಧ ಜಿಲ್ಲೆಗಳಲ್ಲಿ ಸಾಗಲಿದೆ ಎಂದು ಕಾಂಗ್ರೆಸ್ ತಿಳಿಸಿದೆ.
ಇನ್ನು ನೆವೆಂಬರ್ 14ರವರೆಗೂ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಯೋಜನೆಮಾಡಿದ್ದು, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಾಂಗ್ರೂರ್ ನಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ನಂತರ ರೋಡ್ ಶೋ ಮೂಲಕ ಪಾಟಿಯಾಲಕ್ಕೆ ಯಾತ್ರೆ ಸಾಗಲಿದೆ. ನಾಳೆ ನಡೆಯಬೇಕಾಗಿದ್ದ ಈ ಕಾರ್ಯಕ್ರಮವನ್ನು ಅಕ್ಟೋಬರ್ 3ಕ್ಕೆ ಮುಂದೂಡಲಾಗಿದೆ.
ಎರಡು ಮೂರು ದಿನಗಳಲ್ಲಿ ರಾಹುಲ್ ಗಾಂಧಿ ಪಂಜಾಬ್ ಹಾಗೂ ಹರಿಯಾಣಕ್ಕೆ ಆಗಮಿಸಲಿದ್ದಾರೆ ಎಂದು ಹರಿಯಾಣ ಕಾಂಗ್ರೆಸ್ ಅಧ್ಯಕ್ಷೆ ಕುಮಾರಿ ಶೆಲ್ಜಾ ತಿಳಿಸಿದ್ದಾರೆ.