ಲಖನೌ, ಅ.01 (DaijiworldNews/HR): ಉತ್ತರ ಪ್ರದೇಶದ ಹತ್ರಾಸನಲ್ಲಿ ಸಾಮೂಹಿಕ ಅತ್ಯಾಚಾರದಿಂದ ಮೃತಪಟ್ಟ ಯುವತಿ ಕುಟುಂಬಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಂತ್ರಸ್ತೆಯ ತಂದೆ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ್ದು, ಈ ವೇಳೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ, ಮೃತಳ ಕುಟುಂಬಕ್ಕೆ ಎಲ್ಲಾ ನೆರವು ನೀಡುವುದಾಗಿ ಹೇಳಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಸಂತ್ರಸ್ತೆಯ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ, ಜೊತೆಗೆ ಕುಟುಂಬದ ಸದಸ್ಯರೊಬ್ಬರಿಗೆ ಕಿರಿಯ ಸಹಾಯಕ ಹುದ್ದೆಯನ್ನ ನೀಡಲಾಗುತ್ತದೆ ಮತ್ತು ಕುಟುಂಬಕ್ಕೆ ರಾಜ್ಯ ನಗರಾಭಿವೃದ್ಧಿ ಏಜೆನ್ಸಿ ಅಡಿ ಹತ್ರಾಸ್ನಲ್ಲಿ ಮನೆ ನೀಡಲಾಗುತ್ತದೆ ಎಂದು ವರದಿಯಾಗಿದೆ.