ಲಕ್ನೋ,ಅ.01 (DaijiworldNews/HR): ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಯ ಪ್ರಕರಣ ಮರೆಯುವ ಮುನ್ನವೇ ಉತ್ತರ ಪ್ರದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಮತ್ತೋರ್ವ ದಲಿತ ಯುವತಿಯನ್ನು ಸಾಮೂಹಿಕವಾಗಿ ಅತ್ಯಾಚಾರಗೈದು ಕೊಲೆಗೈದಿದ್ದು, ಆರೋಪಿಗಳಾದ ಶಾಹೀದ್ ಮತ್ತು ಸಾಹಿಲ್ ಎಂಬುವವನ್ನು ಬಂಧಿಸಲಾಗಿದೆ.
22 ವರ್ಷದ ಬಲರಾಮಪುರ ಜಿಲ್ಲೆಯ ಗೈಸರಿ ಗ್ರಾಮದ ಯುವತಿಯನ್ನು ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ.
ಈ ಘಟನೆ ಮಂಗಳವಾರ ನಡೆದಿದ್ದು, ಎರಡನೇ ವರ್ಷದ ಪದವಿ ವಿದ್ಯಾರ್ಥಿನಿಯಾಗಿರುವ ಯುವತಿ ಸಮೀಪದ ಪಟ್ಟಣದಲ್ಲಿರುವ ಕಾಲೇಜಿಗೆ ಫೀಸ್ ಕಟ್ಟಲು ತೆರಳಿದ್ದಳು. ಕಾಲೇಜಿನಿಂದ ಬರುವಾಗ ದಾರಿ ಮಧ್ಯೆ ಆಕೆಯನ್ನು ಅಪಹರಿಸಿ ಆಕೆಯನ್ನು ಅತ್ಯಾಚಾರ ಮಾಡಲಾಗಿದೆ ಎಂದು ಕುಟುಂಬಸ್ಥರು ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ,
ಇನ್ನು ಅತ್ಯಾಚಾರಕ್ಕೆ ಒಳಗಾದ ಯುವತಿ ನಂತರ ರಿಕ್ಷಾದಲ್ಲಿ ಮನೆಗೆ ಬಂದಿದ್ದು, ಗಂಭೀರ ಪರಿಸ್ಥಿತಿಯಲ್ಲಿದ್ದ ಆಕೆ ಮನೆಯವರಿಗೆ ವಿಚಾರ ತಿಳಸಿದ್ದು, ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಆಸ್ಪತ್ರೆ ದಾರಿ ಮಧ್ಯೆ ಆಕೆ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.