ಶ್ರೀನಗರ, ಅ.01 (DaijiworldNews/HR): ಪಾಕಿಸ್ತಾನ ಸೇನಾ ಪಡೆ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ ಪರಿಣಾಮ ಭಾರತೀಯ ಯೋಧ ಹುತಾತ್ಮರಾದ ಘಟನೆ ಜಮ್ಮು-ಕಾಶ್ಮೀರದ ಕೃಷ್ಣಾ ಘಾಟಿ ಸೆಕ್ಟರ್ ಪ್ರದೇಶದಲ್ಲಿ ನಡೆದಿದೆ.
ಸಾಂಧರ್ಭಿಕ ಚಿತ್ರ
ಕದನ ವಿರಾಮ ಉಲ್ಲಂಘಿಸಿದ ಘಟನೆ ಬುಧವಾರ ತಡರಾತ್ರಿ ನಡೆದಿತ್ತು. ಪಾಕಿಸ್ತಾನ ಸೇನಾ ಪಡೆ ಪ್ರಚೋದನಕಾರಿಯಾಗಿ ಹಾಗೂ ನಿರಂತರವಾಗಿ ಗುಂಡಿನ ದಾಳಿ ನಡೆಸಿರುವುದಾಗಿ ಹೇಳಿದೆ ಎಂದು ತಿಳಿದು ಬಂದಿದೆ.
ಇನ್ನು ಪಾಕ್ ಪಡೆಯ ಗುಂಡಿನ ದಾಳಿಗೆ ಲ್ಯಾನ್ಸ್ ನಾಯಕ್ ಕರ್ನೈಲ್ ಸಿಂಗ್ ಹುತಾತ್ಮರಾಗಿರುವುದಾಗಿ ಲೆಫ್ಟಿನೆಂಟ್ ಕರ್ನಲ್ ದೇವೇಂದ್ರ ಆನಂದ್ ತಿಳಿಸಿದ್ದಾರೆ.
ಹುತಾತ್ಮ ಲ್ಯಾನ್ಸ್ ನಾಯಕ್ ಕರ್ನೈಲ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಜನರಲ್ ಕಮಾಂಡಿಂಗ್ ಅಧಿಕಾರಿಗಳು ಹಾಗೂ ಎಲ್ಲಾ ರಾಂಕ್ ಶ್ರೇಣಿಯ ಅಧಿಕಾರಿಗಳು ಗೌರವ ಸಲ್ಲಿಸಿರುವುದಾಗಿ ವರದಿ ತಿಳಿಸಿದೆ.