ಕೋಲ್ಕತಾ, ಅ.01 (DaijiworldNews/HR): ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂತಹ ಅನಾಗರೀಕ, ನಾಚಿಕೆಗೇಡಿನ ಘಟನೆ ಖಂಡಿಸಲು ನನ್ನ ಬಳಿ ಯಾವುದೇ ಪದಗಳಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಂತ್ರಸ್ತೆಯ ಕುಟುಂಬಸ್ಥರ ವಿರೋಧದ ನಡುವೆಯೂ ಮಾಹಿತಿ ನೀಡದೆಯೇ ಪೊಲೀಸರು ಯುವತಿಯ ಅಂತ್ಯಸಂಸ್ಕಾರ ನೆಡೆಸಿದ್ದು ನಿಜಕ್ಕೂ ನಾಚಿಕೆಗೇಡಿನ ಕೆಲಸವಾಗಿದೆ. ಚುನಾವಣೆ ವೇಳೆ ಘೋಷಣೆಗಳನ್ನು ಮಾಡುವುದು ಭರವಸೆಗಳನ್ನು ನೀಡುವುದೆಲ್ಲವೂ ಈ ಘಟನೆಯಿಂದ ಬಹಿರಂಗಗೊಂಡಿದೆ ಎಂದು ತಿಳಿಸಿದ್ದಾರೆ.
ಇನ್ನು ಉತ್ತರ ಪ್ರದೇಶದ ಹತ್ರಾಸ್ ಸಾಮೂಹಿಕ ಅತ್ಯಾಚಾರ 2012ರಲ್ಲಿ ದೆಹಲಿಯಲ್ಲಿ ನಡೆದ ನಿರ್ಭಯ ಗ್ಯಾಂಗ್ರೇಪ್ ಮಾದರಿಯಲ್ಲೇ ನಡೆದಿದೆ ಎಂದರು.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಎಸ್ಐಟಿ ತನಿಖೆಗೆ ವಹಿಸಿದ್ದರು. ಅಲ್ಲದೆ, ಸಂತ್ರಸ್ತೆಯ ಕುಟುಂಬಕ್ಕೆ ರೂ.25 ಲಕ್ಷ ಪರಿಹಾರ ಘೋಷಣೆ ಮಾಡಿ, ಕುಟುಂಬ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ತಿಳಿಸಿದೆ.