ನವದೆಹಲಿ, ಅ 01(DaijiworldNews/PY): ಕೊರೊನಾ ಅಸಮರ್ಪಕ ನಿರ್ವಹಣೆಯ ಬಗ್ಗೆ ಸ್ವತಂತ್ರ ತನಿಖೆಗೆ ನಿವೃತ್ತ ಅಧಿಕಾರಿಗಳು ಸಲ್ಲಿಸಿದ್ದ ಪಿಐಎಲ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ.
ನ್ಯಾಯಮೂರ್ತಿ ಎಲ್.ಎನ್.ರಾವ್ ನೇತೃತ್ವದ ನ್ಯಾಯಪೀಠವು ವಕೀಲ ಪ್ರಶಾಂತ್ ಭೂಷಣ್ ಅವರಿಗೆ ಹೇಳಿದ್ದು, ಫೆಬ್ರವರಿ 4ರಂದುಗೃಹ ಸಚವಾಲಯ ಸಲಹೆ ನೀಡಿದೆ. ಆದರೆ. ಮಾರ್ಚ್ 4ರವರೆಗೆ ಅಂತರಾಷ್ಟ್ರೀಯ ಪ್ರಯಾಣಿಕರ ತಪಾಸಣೆ ಮಾಡಿಲ್ಲ ಎಂದು ತಿಳಿಸಿದರು.
ಕೇಂದ್ರ ಗೈ ಸಚಿವಾಲಯದ ಸಲಹೆಯ ಹೊರತಾಗಿಯೂ ಕೂಡಾ ಫೆ.4ರಂದು ನಮಸ್ತೆ ಟ್ರಂಪ್ ಕಾರ್ಯಕ್ರಮ ನಡೆಸಲು ಅನುಮತಿ ನೀಡಲಾಗಿದ್ದು, ಈ ಕಾರ್ಯಕ್ರಮದಲ್ಲಿ ಒಂದು ಲಕ್ಷ ಮಂದಿ ಸೇರಲು ಅವಕಾಶ ಕಲ್ಪಿಸಲಾಗಿತ್ತು ಎಂದು ಪ್ರಶಾಂತ್ ಭೂಷಣ್ ಹೇಳಿದರು.
ತಜ್ಞರು ನೀಡಿರುವ ಸಲಹೆಗಳನ್ನು ಸಲ್ಲಿಸಿದ ಪ್ರಶಾಂತ್ ಭೂಷಣ್ ಅವರು, ಲಾಕ್ಡೌನ್ ಹಿನ್ನೆಲೆ ಜಿಡಿಪಿ ಶೇ.23ರಷ್ಟು ಇಳಿಕೆಯಾಗಿದ್ದು, ಲಕ್ಷಾಂತರ ಉದ್ಯೋಗ ನಷ್ಟವಾಗಿದೆ. ಅಲ್ಲದೇ, ಆರ್ಥಿಕತೆಯು ನಾಶವಾಗಿದೆ ಎಂದರು.
ಕೊರೊನಾ ನಿಯಂತ್ರಿಸಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ ಹಾಗೂ ಅಧಿಕೃತ ಅಂಕಿ-ಅಂಶಗಳ ಪ್ರಕಾರ 63 ಲಕ್ಷಕ್ಕೂ ಅಧಿಕ ಮಂದಿ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ ಎಂದು ಭೂಷಣ್ ವಾದಿಸಿದರು.
ಈ ವಿಚಾರ ಸಾರ್ವಜನಿಕವಾಗಿ ಚರ್ಚೆಯಾಗಬೇಕಾದ ವಿಷಯ ಹಾಗೂ ಈ ವಿಚಾರದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸುವುದಿಲ್ಲ ಎಂದು ನ್ಯಾಯಪೀಠ ತಿಳಿಸಿದೆ.