ನವದೆಹಲಿ, ಅ 01(DaijiworldNews/PY): ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ರಾಜ್ಯಸಭಾ ಸಂಸದ ಅಹ್ಮದ್ ಪಟೇಲ್ ಅವರಿಗೆ ಕೊರೊನಾ ದೃಢಪಟ್ಟಿದೆ.
ಈ ಬಗ್ಗೆ ಟ್ವೀಟ್ ಮೂಲಕ ತಿಳಿಸಿರುವ ಅವರು, ನನಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದ ಎಲ್ಲರು ಸ್ವಯಂ-ಪ್ರತ್ಯೇಕಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
ಇತ್ತೀಚೆಗೆ ಮುಕ್ತಾಯಗೊಂಡ ಸಂಸತ್ತಿನ ಮಾನ್ಸೂನ್ ಅಧಿವೇಶನದಲ್ಲಿ ಇವರ ಭಾಗವಹಿಸಿದ್ದರು.