ಬೆಂಗಳೂರು, ಅ 01(DaijiworldNews/PY): ಅತ್ಯಾಚಾರಕ್ಕೀಡಾಗಿ ಸಾವನ್ನಪ್ಪಿರುವ ದಲಿತ ಯುವತಿಯ ಕುಟುಂಬವನ್ನು ಭೇಟಿಯಾಗಲು ಗುರುವಾರ ಹತ್ರಸ್ ಜಿಲ್ಲೆಯತ್ತ ಹೊರಟಿದ್ದ ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ವಶಕ್ಕೆ ಪಡೆದಿದ್ದು, ತಕ್ಷಣವೇ ಅವರನ್ನು ಬಿಡುಗಡೆ ಮಾಡುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಆಗ್ರಹಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಯುಪಿ ಸರ್ಕಾರವು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರನ್ನು ಎಚ್ಚರಿಕೆ ಹಾಗೂ ಕಾಳಜಿಯಿಂದ ನೋಡಿಕೊಳ್ಳಬೇಕು. ಇಬ್ಬರೂ ಕೂಡಾ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿದ್ದಾರೆ. ಪ್ರತಿಭಟನೆ ಸಾಂವಿಧಾನಿಕ ಹಕ್ಕು. ಅವರನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಒತ್ತಾಯಿಸಿದ್ದಾರೆ.
ಅತ್ಯಾಚಾರಕ್ಕೀಡಾಗಿ ಸಾವನ್ನಪ್ಪಿರುವ ದಲಿತ ಯುವತಿಯ ಕುಟುಂಬವನ್ನು ಭೇಟಿಯಾಗಲು ಹತ್ರಸ್ ಜಿಲ್ಲೆಯತ್ತ ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ತೆರಳಿದ್ದು, ರಾಹುಲ್ ಮತ್ತು ಪ್ರಿಯಾಂಕಾ ಅವರಿದ್ದ ವಾಹನವು ಗಡಿಯನ್ನು ದಾಟಿದ ವೇಳೆ ಹತ್ರಸ್ನಿಂದ ಸುಮಾರು 142 ಕಿ.ಮೀ. ದೂರದಲ್ಲಿದ್ದ ಗ್ರೇಟರ್ ನೋಯ್ಡಾದಲ್ಲಿ ರಾಹುಲ್ - ಪ್ರಿಯಾಂಕಾ ಅವರ ಬೆಂಗಾವಲು ವಾಹನವನ್ನು ತಡೆಯಲಾಗಿದ್ದು ರಾಹುಲ್, ಪ್ರಿಯಾಂಕ ವಾಹನದಿಂದ ಕೆಳಗಿಳಿದು ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಹತ್ರಸ್ ಜಿಲ್ಲೆಯತ್ತ ಸಾಗಿದ್ದು ಪೊಲೀಸರು ಬಂಧಿಸಿದ್ದಾರೆ.