ಬೆಂಗಳೂರು, ಅ.02 (DaijiworldNews/HR): ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಗುತ್ತಿದ್ದು, ಇದೀಗ ಕೈಮಗ್ಗ ಮತ್ತು ಜವಳಿ ಸಚಿವ ಶ್ರೀಮಂತ ಪಾಟೀಲ್ ಗೆ ಸೋಂಕು ದೃಢಪಟ್ಟಿದೆ.
ಈ ಕುರಿತು ತಮ್ಮ ಫೇಸ್ ಬುಕ್ ನಲ್ಲಿ ಮಾಹಿತಿ ನೀಡಿರುವ ಶ್ರೀಮಂತ ಪಾಟೀಲ್ , ನಾನು ಕೋವಿಡ್ ಪರೀಕ್ಷೆ ಮಾಡಿಸಿದ್ದು, ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ಯಾವುದೇ ರೋಗ ಲಕ್ಷಣಗಳು ಇಲ್ಲದಿದ್ದರೂ, ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ ಎಂದರು.
ಇನ್ನು ಕಳೆದ ಎರಡು ಮೂರು ದಿನಗಳಿಂದ ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದಿರುವವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸುತ್ತೇನೆ. ನಿಮ್ಮೆಲ್ಲರ ಹಾರೈಕೆ, ಆಶೀರ್ವಾದದಿಂದ ಆದಷ್ಟು ಬೇಗ ಗುಣಮುಖನಾಗಿ, ನಿಮ್ಮ ಸೇವೆಗೆ ಮರಳುತ್ತೇನೆ ಎಂದು ಹೇಳಿದ್ದಾರೆ.