ಕೊಲ್ಕತ್ತಾ, ಅ. 02 (DaijiworldNews/MB) : ನನಗೆ ಒಂದು ವೇಳೆ ಕೊರೊನಾ ಸೋಂಕು ತಗುಲಿದರೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ತಬ್ಬಿಕೊಳ್ಳುವುದಾಗಿ ಹೇಳಿದ್ದ ಪಶ್ಚಿಮ ಬಂಗಾಳದ ನೂತನ ರಾಷ್ಟ್ರೀಯ ಕಾರ್ಯದರ್ಶಿ ಅನುಪಮ್ ಹಜ್ರಾಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.
ಅವರಿಗೆ ಕೊರೊನಾ ಸೋಂಕು ಪರೀಕ್ಷೆ ನಡೆಸಲಾಗಿದ್ದು ವರದಿ ಪಾಸಿಟಿವ್ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಾಗೆಯೇ ಅನುಪಮ್ ಹಜ್ರಾ ಕೂಡಾ ಫೇಸ್ಬುಕ್ನಲ್ಲಿ ತಿಳಿಸಿದ್ದಾರೆ.
ಅವರು ಕೆಲ ದಿನಗಳ ಹಿಂದೆ ನನಗೆ ಒಂದು ವೇಳೆ ಕೊರೊನಾ ಸೋಂಕು ತಗುಲಿದರೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ತಬ್ಬಿಕೊಳ್ಳುವುದಾಗಿ ಹೇಳಿದ್ದು ಈ ಹೇಳಿಕೆ ನೀಡಿದ ಹಿನ್ನೆಲೆ ಹಜ್ರಾ ವಿರುದ್ದ ದೂರು ದಾಖಲಿಸಲಾಗಿತ್ತು.
ಬರುಯಿಪುರದಲ್ಲಿ ಪಕ್ಷದ ಕಾರ್ಯಕ್ರಮದಲ್ಲಿ ಹಜ್ರಾ ಅವರು ನಗೆ ಒಂದು ವೇಳೆ ಕೊರೊನಾ ಸೋಂಕು ತಗುಲಿದರೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ತಬ್ಬಿಕೊಳ್ಳುತ್ತೇನೆ. ಕೊರೊನಾ ರೋಗಿಗಳ ಕುಟುಂಬ ಅನುಭವಿಸುವ ನೋವು ಅವರು ಕೂಡಾ ಅನುಭವಿಸಬೇಕು. ಕೊರೊನಾಗಿಂತಲೂ ದೊಡ್ಡ ಶತ್ರುವಾಗಿರುವ ಮಮತಾ ಬ್ಯಾನರ್ಜಿ ವಿರುದ್ಧ ನಮ್ಮ ಪಕ್ಷದ ಕಾರ್ಯಕರ್ತರು ಹೋರಾಡುತ್ತಿದ್ದಾರೆ ಎಂದು ಹೇಳಿದ್ದರು.
ಅವರು ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿಯಾಗಿ ನೇಮಕಗೊಂಡ ಒಂದು ದಿನದ ಬಳಿಕ ಈ ಹೇಳಿಕೆ ನೀಡಿದ್ದು ಈ ಹೇಳಿಕೆಗೆ ಭಾರೀ ಖಂಡನೆ ವ್ಯಕ್ತವಾಗಿತ್ತು. ಪಶ್ಚಿಮ ಬಂಗಾಳದ ಬಿಜೆಪಿ ಕಾರ್ಯಕರ್ತರು ಕೂಡಾ ಹಜ್ರಾ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದು "ಜವಾಬ್ದಾರಿಯುತ ಸ್ಥಾನಗಳಲ್ಲಿರುವವರು ಅವರು ಮಾತನಾಡುವ ಸಂದರ್ಭ ಜಾಗರೂಕರಾಗಿರಬೇಕು" ಎಂದು ಹೇಳಿದ್ದರು.