ಬೆಂಗಳೂರು, ಅ. 02 (DaijiworldNews/SM): ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ದಿನದಿಂದ ದಿನಕ್ಕೆ ಹಲವು ರೀತಿಯ ಬೆಳವಣಿಗೆಗಳು ನಡೆಯುತ್ತಿದ್ದು, ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಪಾಯಿಂಟ್ಮೆಂಟ್ ಕೊಟ್ಟ ತಕ್ಷಣವೇ ದೆಹಲಿಗೆ ತೆರಳುವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.
ವಿಧಾನಸೌಧದಲ್ಲಿ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿಗೆ ಟೈಮ್ ಕೇಳಿದ್ದೇನೆ. ಅವರು ಅವಕಾಶ ಕೊಟ್ಟ ತಕ್ಷಣವೇ ದೆಹಲಿಗೆ ತೆರಳಿ ಚರ್ಚಿಸಲಿದ್ದೇನೆ ಎಂದಿದ್ದಾರೆ.
ಸಿಎಂ ಯಡಿಯೂರಪ್ಪ ಅವರು ಸಚಿವ ಸಂಪುಟ ವಿಸ್ತರಣೆ ಸಂಬಂಧ ಈಗಾಗಲೇ ಒಂದು ಬಾರಿ ದೆಹಲಿಗೆ ತೆರಳಿ ಹೈಕಮಾಂಡ್ ಜೊತೆ ಮಾತುಕತೆ ನಡೆಸಿದ್ದಾರೆ. ಆದರೆ, ಆ ಸಂದರ್ಭದಲ್ಲಿ ಅಮಿತ್ ಶಾ ಅವರ ಭೇಟಿ ಸಾಧ್ಯವಾಗಿರಲಿಲ್ಲ. ಅಲ್ಲದೆ, ಇಲ್ಲಿಯ ತನಕ ಸಂಪುಟ ವಿಸ್ತರಣೆಗೂ ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಮತ್ತೆ ಸಿಎಂ ಬಿ.ಎಸ್. ಯಡಿಯೂರಪ್ಪ ದೆಹಲಿಯತ್ತ ಮುಖಮಾಡಿದ್ದಾರೆ. ಆದರೆ, ಅಮಿತ್ ಶಾ ಅವರು ಕಲಾವಕಾಶ ನೀಡಿದ ಸಂದರ್ಭದಲ್ಲಿ ದೆಹಲಿಗೆ ತೆರಳಿ ಚರ್ಚಿಸುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.