ತುಮಕೂರು, ಅ. 03 (DaijiworldNews/MB) : ಸಿದ್ದರಾಮಯ್ಯನವರು ಹಿಂದೂ ವಿರೋಧಿ, ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಹಿಂದೂಗಳ ಮೇಲೆ ದಾಳಿ ನಡೆಸಿದ ಎಸ್ಡಿಪಿಐ ಕಾರ್ಯಕರ್ತರ ವಿರುದ್ದವಿದ್ದ ಪ್ರಕರಣಗಳನ್ನು ರದ್ದು ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ಕಾಂಗ್ರೆಸ್ ಮುಖಂಡ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಕೆಲವೇ ದಿನಗಳಲ್ಲಿ ಶಿರಾ ವಿಧಾನಸಭಾ ಕ್ಷೇತ್ರ ಉಪ ಚುನಾವಣೆ ನಡೆಯಲಿದ್ದು ಬಿಜೆಪಿಯು ಚುನಾವಣಾ ಪ್ರಚಾರಕ್ಕೆ ಇಳಿದಿದೆ. ಚಿಕ್ಕನಹಳ್ಳಿ ಬಳಿ ಕಳ್ಳಂಬೆಳ್ಳ ಹಾಗೂ ಚಿಕ್ಕನಹಳ್ಳಿ ರ್ಯಾಲಿಗೆ ಬಿಜೆಪಿ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದರು.
ಇನ್ನು ಈ ಸಂದರ್ಭದಲ್ಲೇ ಸಂಸದ ಪ್ರತಾಪ್ ಸಿಂಹ ಮಾತನಾಡಿ, ಹಿಂದೂ ವಿರೋಧಿಯಾದ, ಕೋಮು ಹಿಂಸೆಗೆ ಪ್ರಚೋದನೆ ನೀಡಿದ ಟಿಪ್ಪು ಜಯಂತಿ ಆಚರಣೆಗೆ ಸಿದ್ದರಾಮಯ್ಯ ಅವರು ಮುಂದಾಗಿದ್ದರು. ಅಲ್ಪಸಂಖ್ಯಾತರನ್ನು ಓಲೈಕೆಯ ರಾಜಕೀಯ ಮಾಡುತ್ತಿದ್ದಾರೆ ಎಂದು ದೂರಿದರು.