ಬೆಂಗಳೂರು, ಅ. 03 (DaijiworldNews/HR): ಐಎಎಸ್ ಅಧಿಕಾರಿ ದಿವಂಗತ ಡಿ.ಕೆ. ರವಿ ಪತ್ನಿ ಕುಸುಮಾ ಅವರ ಹೆಸರು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಟೀಕೆಟ್ ನೀಡುವಂತೆ ಶಾಸಕರು, ಮಾಜಿ ಸಂಸದರು ಸೇರಿ ಹಲವರು ಶಿಫಾರಸು ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಡಿಕೆಶಿ , ಕುಸುಮಾ ಅವರ ತಂದೆ ಮೊದಲು ಕಾಂಗ್ರೆಸ್ ಪಕ್ಷದಲ್ಲಿದ್ದರು ಆದರೆ ಯಾವುದೋ ಕಾರಣಕ್ಕೆ ಬಿಟ್ಟು ಹೋಗಿದ್ದರು. ಕುಸುಮಾ ಅವರಿಗೆ ಟಿಕೆಟ್ ಕೊಡಲು ಪರಿಗಣಿಸಿ ಎಂದು ಕೆಲವರು ಸಲಹೆ ನೀಡುತ್ತಿದ್ದಾರೆ. ಈ ಬಗ್ಗೆ ನಾವಿನ್ನೂ ಚರ್ಚಿ ಮಾಡಿಲ್ಲ, ಆ ಕ್ಷೇತ್ರದಲ್ಲಿ ಏಳೆಂಟು ಮಂದಿ ಟಿಕೆಟ್ ಆಕಾಂಕ್ಷಿಗಳಿದ್ದಾರೆ ಎಂದು ಹೇಳಿದ್ದಾರೆ.
ಇನ್ನು ರಾಜರಾಜೇಶ್ವರಿ ನಗರ ಉಪ ಚುನಾವಣೆ ಟಿಕೆಟ್ ವಿಷಯದಲ್ಲಿ ಚರ್ಚಿಸಲು ಹಿರಿಯರಾದ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಸಮಿತಿ ರಚಿಸಿದ್ದೇನೆ. ಹಾಗಾಗಿ ಅವರು ಮುಖಂಡರ ಅಭಿಪ್ರಾಯ ತಿಳಿದು ಶಿಫಾರಸು ಮಾಡುತ್ತಾರೆ ಎಂದರು.
ಶಿರಾ ಕ್ಷೇತ್ರದಲ್ಲಿ ಎಲ್ಲರೂ ಸೇರಿ ಒಂದು ಅಭಿಪ್ರಾಯಕ್ಕೆ ಬಂದಿದ್ದು, ಅವರು ಸೂಚಿಸಿದ ಅಭ್ಯರ್ಥಿಯನ್ನು ಎರಡು ಅಥವಾ ಮೂರು ದಿನಗಳಲ್ಲಿ ಹೈಕಮಾಂಡ್ಗೆ ಶಿಫಾರಸು ಮಾಡುತ್ತೇನೆ ಎಂದು ತಿಳಿಸಿದ್ದಾರೆ.