ಬಲಿಯಾ, ಅ. 03(DaijiworldNews/PY): ಸಿಕಂದರಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 15 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಲಾಗಿದೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು ಆಸಿಫ್ (28) ಎಂದು ಗುರುತಿಸಲಾಗಿದ್ದು, ಆತನನ್ನು ಬಂಧಿಸಲಾಗಿದೆ.
ಬುಧವಾರದಂದು ಬಾಲಕಿಯನ್ನು ಅಪಹರಿಸಿ, ಆಕೆಯ ಮೇಲೆ ಅತ್ಯಾಚಾರವೆಸಗಲಾಗಿದೆ. ಶುಕ್ರವಾರದಂದು ಬೆಳಿಗ್ಗೆ ರಾಸ್ರಾ ಬಸ್ ನಿಲ್ದಾಣದಲ್ಲಿ ಆಕೆಯನ್ನು ರಕ್ಷಿಸಲಾಗಿದೆ ಎಂದು ಎಸ್ಎಚ್ಒ ಅಮರ್ಜೀತ್ ಯಾದವ್ ತಿಳಿಸಿದ್ದಾರೆ.
ಸಂತ್ರಸ್ತೆಯ ತಂದೆಯ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಬಾಲಕಿಯ ವೈದ್ಯಕೀಯ ಪರೀಕ್ಷೆ ನಡೆಸಲು ಆಕೆಯನ್ನು ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.