ಮಡಿಕೇರಿ, ಅ. 03 (DaijiworldNews/MB) : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಈವರೆಗೆ 1,500 ಪೊಲೀಸರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಈ ಪೈಕಿ 73 ಸಿಬ್ಬಂದಿಗಳು ಮೃತಪಟ್ಟಿದ್ದಾರೆ ಎಂದು ರಾಜ್ಯ ಪೊಲೀಸ್ ಮಹಾ ನಿದೇಶಕ ಪ್ರವೀಣ್ ಸೂದ್ ಅವರು ಶನಿವಾರ ತಿಳಿಸಿದ್ದಾರೆ.
ಮಡಿಕೇರಿಯಲ್ಲಿ ಶನಿವಾರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈವರೆಗೆ 1,500 ಪೊಲೀಸರಿಗೆ ಕೊರೊನಾ ಪಾಸಿಟಿವ್ ಆಗಿದ್ದು ಈ ಪೈಕಿ 73 ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ. ಸೋಂಕಿತ ಪೊಲೀಸರಿಗೆ ಮನೋಸ್ಥೈರ್ಯ ತುಂಬುಬ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಿಗೆ ಭೇಟಿ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಇನ್ನು ಈ ಸಂದರ್ಭದಲ್ಲೇ ಡ್ರಗ್ ದಂಧೆ ವಿಚಾರವಾಗಿ ಮಾತನಾಡಿದ ಅವರು, ತನಿಖೆ ನಡೆಯುತ್ತಿದ್ದು ಇದರ ಹಿಂದೆ ಯಾರೇ ಇದ್ದರೂ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ರಾಜ್ಯ ರಾಜಧಾನಿ ಬೆಂಗಳೂರಿಗಿಂತ ಅಧಿಕವಾಗಿ ಕೋಲಾರ, ರಾಯಚೂರುಗಳಲ್ಲಿಯೂ ಡ್ರಗ್ಸ್ ಸೇವನೆ, ಸಾಗಾಟ ನಡೆಯುತ್ತಿದೆ. ರಾಜ್ಯದಲ್ಲಿ ಡ್ರಗ್ ಮಾಫಿಯಾಕ್ಕೆ ಕಡಿವಾಣ ಹಾಕುವ ಯತ್ನ ನಾವು ಮಾಡುತ್ತೇವೆ ಎಂದು ಹೇಳಿದ್ದಾರೆ.