ಹುಬ್ಬಳ್ಳಿ, ಅ. 03(DaijiworldNews/PY): ಸರ್ಕಾರದ ಒಂದೊಂದು ಹುಳುಕುಗಳು ಈಗ ಹೊರಗೆ ಬರುತ್ತಿವೆ. ಮುಂದೆ ಏನಾಗುತ್ತದೆ ಎಂದು ಕಾದು ನೋಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.
ನಗರದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರ ಸದಸ್ಯತ್ವ ಅಭಿಯಾನ ಸಮಾರಂಭ ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ಸರ್ಕಾರ ಇರುತ್ತೋ, ಇಲ್ಲವೋ ಎಂದು ಬಹಿರಂಗವಾಗಿ ಸಚಿವರು ಹೇಳಿದ್ದಾರೆ. ಮುಂಬರುವ ದಿನಗಳಲ್ಲಿ ಏನಾಗುತ್ತದೆ ಎನ್ನುವುದನ್ನು ಕಾದು ನೋಡಿ ಎಂದರು.
ಉಪಚುನಾವಣೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ಕಮಿಟಿ ರಚನೆ ಮಾಡಿದ್ದೇವೆ. ಅವರ ವರದಿಯ ಮೇಲೆ ನಾಳೆ ತೀರ್ಮಾನ ಮಾಡಲಿದ್ದೇವೆ ಎಂದು ತಿಳಿಸಿದರು.
ಡ್ರಗ್ಸ್ ಪ್ರಕರಣದ ಬಗ್ಗೆ ಮಾತನಾಡಿದ ಅವರು, ಈ ವಿಚಾರದಲ್ಲಿ ಸರ್ಕಾರಕ್ಕೆ ಒತ್ತಡ ಇದೆ ಎನ್ನುವ ಬಗ್ಗೆ ತಿಳಿದಿದೆ. ಹಾಗಾಗಿ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದಾರೆ ಎಂದು ಹೇಳಿದರು.