ನವದೆಹಲಿ, ಅ. 03(DaijiworldNews/PY): ಉತ್ತರಪ್ರದೇಶದ ಹತ್ರಸ್ನಲ್ಲಿ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಕುಟುಂಬದ ಸದಸ್ಯರನ್ನು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ.
ಇಂದು ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಹತ್ರಾಸ್ಗೆ ತೆರಳುತ್ತಿದ್ದ ಅವರ ಕಾರನ್ನು ದೆಹಲಿ- ನೋಯ್ಡಾ ಗಡಿಯಲ್ಲಿಯೇ ಉತ್ತರ ಪ್ರದೇಶ ಪೊಲೀಸರು ತಡೆದಿದ್ದರು. ಆದರೆ ಸಂತ್ರಸ್ತ ಯುವತಿಯ ಕುಟುಂಬ ಸದಸ್ಯರನ್ನು ಭೇಟಿ ಮಾಡಲು ತಮಗೆ ಅವಕಾಶ ನೀಡಬೇಕು ಎಂದು ಕಾಂಗ್ರೆಸ್ ನಾಯಕರು ಒತ್ತಾಯ ಮಾಡಿದ್ದು, ಈ ನಿಟ್ಟಿನಲ್ಲಿ, ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಐವರಿಗೆ ಮಾತ್ರ ಹತ್ರಸ್ ಗೆ ತೆರಳಲು ಅನುಮತಿ ನೀಡಿತ್ತು.
ಅತ್ಯಾಚಾರಕ್ಕೀಡಾಗಿ ಸಾವನ್ನಪ್ಪಿರುವ ದಲಿತ ಯುವತಿಯ ಕುಟುಂಬವನ್ನು ಭೇಟಿಯಾಗಲು ಹತ್ರಸ್ ಜಿಲ್ಲೆಯತ್ತ ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ತೆರಳಿದ್ದು, ರಾಹುಲ್ ಮತ್ತು ಪ್ರಿಯಾಂಕಾ ಅವರಿದ್ದ ವಾಹನವು ಗಡಿಯನ್ನು ದಾಟಿದ ವೇಳೆ ಹತ್ರಸ್ನಿಂದ ಸುಮಾರು 142 ಕಿ.ಮೀ. ದೂರದಲ್ಲಿದ್ದ ಗ್ರೇಟರ್ ನೋಯ್ಡಾದಲ್ಲಿ ರಾಹುಲ್ - ಪ್ರಿಯಾಂಕಾ ಅವರ ಬೆಂಗಾವಲು ವಾಹನವನ್ನು ತಡೆಯಲಾಗಿದ್ದು ಅವರನ್ನು ಪೊಲೀಸರು ಬಂಧಿಸಿದ್ದರು.