ಬೆಂಗಳೂರು,ಅ. 04 (DaijiworldNews/HR): ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಹಿನ್ನಲೆಯಲ್ಲಿ ಪ್ರವಸೋದ್ಯಮ ಸಚಿವ ಸಿ.ಟಿ.ರವಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಅಕ್ಟೋಬರ್ 2ರಂದು ಸಿ.ಟಿ.ರವಿ ರಾಜೀನಾಮೆ ನೀಡಲು ನಿರ್ಧರಿಸಿದ್ದರು. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಸಿಗದ ಕಾರಣ ಶನಿವಾರ ರಾಜೀನಾಮೆ ಸಲ್ಲಿಸಿದ್ದಾರೆ. ಇನ್ನು ಸೋಮವಾರ ದೆಹಲಿಗೆ ಪ್ರಯಾಣ ಬೆಳಸಲಿರುವ ರವಿ ರಾಜೀನಾಮೆ ಬಗ್ಗೆ ಜೆಪಿ ನಡ್ಡಾಗೆ ಮಾಹಿತಿ ತಿಳಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಅ. 5 ಮತ್ತು 6ರಂದು ದೆಹಲಿಯಲ್ಲಿ ಪಕ್ಷದ ಸಂಘಟನಾ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಸಿ.ಟಿ.ರವಿ ಭಾಗವಹಿಸಲಿದ್ದು, ಅವರ ರಾಜೀನಾಮೆ ಸ್ವೀಕಾರ ಬಗ್ಗೆ ಸೋಮವಾರ ನಿರ್ಣಯ ತೆಗೆದುಕೊಳ್ಳಲಾಗುತ್ತದೆ.