ನವದೆಹಲಿ,ಅ. 04 (DaijiworldNews/HR): ಉತ್ತರ ಪ್ರದೇಶದ ಹತ್ರಸ್ ನಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಗೀಡಾದ ಯುವತಿಯ ಕುಟುಂಬಸ್ಥರನ್ನು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಭೇಟಿ ಮಾಡಿದ್ದು, ಈ ವೇಳೆ ಸಂತ್ರಸ್ಥೆಯ ಕುಟುಂಬಸ್ಥರು ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದು, ಈ ಘಟನೆ ಬಗ್ಗೆ ಸುಪ್ರೀಂ ಕೋರ್ಟ್ ಮೂಲಕ ನ್ಯಾಯಾಂಗ ತನಿಖೆ ನಡೆಸಬೇಕು ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರನ್ನು ಅಮಾನತು ಮಾಡಬೇಕೆಂದು ಒತ್ತಾಯಿಸಿದ್ದಾರೆ ಎಂಬುದಾಗಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
ಈ ಕುರಿತು ಸಂತ್ರಸ್ಥೆ ಕುಟುಂಬದವರ ಭೇಟಿ ಬಳಿಕ ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ, ಉತ್ತರ ಪ್ರದೇಶ ಸರ್ಕಾರಕ್ಕೆ ಕೆಲವು ಬೇಡಿಕೆಗಳನ್ನು ಮತ್ತು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ಸುಪ್ರೀಂ ಕೋರ್ಟ್ ಮೂಲಕ ನ್ಯಾಯಾಂಗ ತನಿಖೆ ನಡೆಸಬೇಕು ಮತ್ತು ಹತ್ರಸ್ ಜಿಲ್ಲಾ ಮ್ಯಾಜಿಸ್ಟ್ರೇಟ್ ರನ್ನು ಸೇವೆಯಿಂದ ಅಮಾನತುಗೊಳಿಸಬೇಕು. ಇನ್ನು ಮೃತ ಯುವತಿಯ ದೇಹವನ್ನು ಕುಟುಂಬಸ್ಥರ ಅನುಮತಿಯಿಲ್ಲದೆ ಪೆಟ್ರೋಲ್ ಸುರಿದು ಸುಟ್ಟು ಹಾಕಿದ್ದೇಕೆ? ಎಂದು ಟ್ವೀಟ್ ಮಾಡಿದ್ದಾರೆ.
ಇನ್ನು ಈ ಪ್ರಕರಣದ ಕುರಿತು ಪ್ರಶ್ನೆ ಮಾಡುವುದು ಕುಟುಂಬಸ್ಥರ ಹಕ್ಕಾಗಿದೆ, ಇದಕ್ಕೆ ಉತ್ತರ ಪ್ರದೇಶ ಸರ್ಕಾರ ಸರಿಯಾದ ಉತ್ತರ ನೀಡಬೇಕು ಎಂದು ಪ್ರಿಯಾಂಕಾ ಗಾಂಧಿ ಒತ್ತಾಯಿಸಿದ್ದಾರೆ.