ಹೊಸಪೇಟೆ, ಅ. 04(DaijiworldNews/PY): ನಾನು ಅರಣ್ಯ ಇಲಾಖೆಯಲ್ಲಿ ಎಷ್ಟು ದಿನ ಇರುತ್ತೇನೋ, ಇಲ್ಲವೋ ತಿಳಿದಿಲ್ಲ ಎಂದು ಅರಣ್ಯ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.
ಇತ್ತೀಚೆಗೆ ವಿಜಯನಗರ ಕ್ಷೇತ್ರದಲ್ಲಿ ನಡೆದ ಸಮಾರಂಭದ ಸಂದರ್ಭ, ನಾನು ಅರಣ್ಯ ಇಲಾಖೆಯಲ್ಲಿ ಎಷ್ಟು ದಿನ ಇರುತ್ತೇನೋ, ಇಲ್ಲವೋ ತಿಳಿದಿಲ್ಲ ಎಂದು ಹೇಳಿದ್ದೆ. ಆದರೆ, ಮಾಧ್ಯಮಗಳು ಈ ವಿಚಾರವನ್ನು ಸರ್ಕಾರ ಎಷ್ಟು ದಿನ ಇರುತ್ತೋ, ಹೋಗುತ್ತೋ ಎಂದು ಪ್ರಸಾರ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಜನಪ್ರತಿನಿಧಿಗಳಾದ ನಾವು, ಕ್ಷೇತ್ರ ಹಾಗೂ ಕ್ಷೇತ್ರದ ಜನರ ಹಿತಾಸಕ್ತಿಗೆ ಪ್ರಾಶಸ್ತ್ಯ ನೀಡಬೇಕು ಎನ್ನುವ ಅರ್ಥದಲ್ಲಿ ಈ ಹೇಳಿಕೆ ನೀಡಿದ್ದೆ. ಮುಂದೆಯೂ ಕೂಡಾ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದಿದ್ದಾರೆ.
ಶುಕ್ರವಾರದಂದು ಕಮಲಾಪುರದಲ್ಲಿ ಆಯೋಜಿಸಿದ್ದ ವನ್ಯಜೀವ ಸಪ್ತಾಹದಲ್ಲಿ ಮಾತನಾಡಿದ್ದ ಅವರು, ಈ ಸರ್ಕಾರ ಯಾವಾಗ ಹೋಗುತ್ತೋ, ಇರುತ್ತೋ ಎಂದು ತಿಳಿದಿಲ್ಲ ಎಂದು ಹೇಳಿಕೆ ನೀಡಿದ್ದರು.