ಲಖನೌ, ಅ. 04 (DaijiworldNews/HR): ಉತ್ತರಪ್ರದೇಶದ ಹತ್ರಸ್ ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಮರೆಮಾಚುವ ಮುನ್ನವೇ ಇದೀಗ ಮತ್ತೊಂದು ಯುವತಿಯನ್ನು ತುಂಡು ತುಂಡಾಗಿ ಕತ್ತರಿಸಿ ಕೊಲೆ ಗೈದಿರುವ ಅಮಾನವೀಯ ಘಟನೆ ನಡೆದಿದೆ.
ಯುವತಿಯ ದೇಹ ತುಂಡರಿಸಿರುವ ಸ್ಥಿತಿಯಲ್ಲಿ ಉತ್ತರ ಪ್ರದೇಶದ ಕಾನ್ಪುರದ ದೇಹತ್ ಜಿಲ್ಲೆಯ ಹೊರವಲಯದ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದೆ.
ಮೃತ ಯುವತಿಯು ಕಾನ್ಪುರ್ ದೇಹತ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಸೆ.26ರಂದು ನಾಪತ್ತೆಯಾಗಿದ್ದಳು ಎಂದು ಹೇಳಲಾಗಿದೆ. ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಕುಟುಂಬದ ಇಬ್ಬರು ಸದಸ್ಯರನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಮೃತ ಯುವತಿ ತಂದೆ ದೂರಿನಂತೆ, ತಮ್ಮ ಕುಟುಂಬದ ಕೃಷಿ ಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಇಬ್ಬರು ನನ್ನ ಮಗಳನ್ನು ಹತ್ಯೆ ಮಾಡುವ ಬೆದರಿಕೆ ಹಾಕಿದ್ದರು. ಈ ಬಗ್ಗೆ ನಾನು ಪೊಲೀಸ್ ದೂರು ಕೂಡ ನೀಡಿದ್ದೆ ಎಂದು ಹೇಳಿದ್ದಾರೆ.