ಬೆಂಗಳೂರು,ಅ. 04 (DaijiworldNews/HR): ಕೊರೊನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿದ್ದು, ಇದೀಗ ಧಾರವಾಡ ಶಾಸಕ ಅರವಿಂದ್ ಬೆಲ್ಲದ್ ಅವರಿಗೆ ಸೋಂಕು ದೃಢಪಟ್ಟಿದೆ.
ಈ ಕುರಿತು ಟ್ವೀಟರ್ ಮಾಡಿರುವ ಅರವಿಂದ್ ಬೆಲ್ಲದ್, ನಾನು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ನನಗೆ ಸೋಂಕು ದೃಢಪಟ್ಟಿದೆ. ಯಾವುದೇ ರೋಗ ಲಕ್ಷಣಗಳು ಇಲ್ಲದೇ ಇದ್ದರೂ, ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗುತ್ತಿದ್ದೇನೆ. ಈ ಕುರಿತು ಸಾರ್ವಜನಿಕರು, ಮುಖಂಡರು & ಕಾರ್ಯಕರ್ತರು, ಬಂಧುಗಳು ಭಯಪಡುವ ಅಗತ್ಯವಿಲ್ಲ ಹಾಗೂ ದೂರವಾಣಿ ಸಂಪರ್ಕ ಮಾಡಬಾರದೆಂದು ವಿನಂತಿಸುತ್ತೇನೆ.
ತಮ್ಮೆಲ್ಲರ ಪ್ರೀತಿ, ವಿಶ್ವಾಸ, ಅಭಿಮಾನ ಹಾಗೂ ಭಗವಂತನ ಆಶೀರ್ವಾದದಿಂದ ನಾನು ಕ್ಷೇಮವಾಗಿದ್ದೇನೆ. ಕಳೆದ ಹಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕೋವಿಡ್ ಪರೀಕ್ಷೆ ಮಾಡಿಸಲು ವಿನಂತಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.