ಬೆಂಗಳೂರು, ಅ. 04(DaijiworldNews/PY): ದಿವಂಗತ ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಪತ್ನಿ ಎಚ್.ಕುಸುಮಾ ಅವರು ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.
ಕೆಪಿಸಿಸಿ ಕಚೇರಿಗೆ ಆಗಮಿಸಿದ ಕುಸುಮಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಂದ ಪಕ್ಷದ ಸದಸ್ಯತ್ವವನ್ನು ಪಡೆದುಕೊಂಡರು. ಈ ಸಂದರ್ಭ ಮಾಜಿ ಸಿಎಂ ಸಿದ್ದರಾಮಯ್ಯ , ಮಾಜಿ ಡಿಸಿಎಂ ಪರಮೇಶ್ವರ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ರಾಜಕುಮಾರ್ ಭಾಗಿಯಾಗಿದ್ದರು.
ಆರ್.ಆರ್ ನಗರ ಉಪಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಕುಸುಮಾ ರವಿ ಅವರು ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಅಭ್ಯರ್ಥಿಯ ಬಗ್ಗೆ ಡಿಕೆಶಿ ಸೇರಿದಂತೆ ಸಿದ್ದರಾಮಯ್ಯ, ರಾಮಲಿಂಗ ರೆಡ್ಡಿ ಹಾಗೂ ಉಳಿದವರು ತೀರ್ಮಾನ ತೆಗೆದುಕೊಳ್ಳಲಿದ್ದು, ಬಳಿಕ ಈ ಬಗ್ಗೆ ಹೈಕಮಾಂಡ್ನೊಂದಿಗೆ ಚರ್ಚೆ ನಡೆಸಿ ಘೋಷಿಸಲಿದ್ದಾರೆ.