ಲಖನೌ, ಅ. 04(DaijiworldNews/PY): ಹತ್ರಸ್ನಲ್ಲಿ ಸಾಮೂಹಿಕವಾಗಿ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟ ಸಂತ್ರಸ್ತೆಯ ಕುಟುಂಬಕ್ಕೆ ಹತ್ರಸ್ನ ಜಿಲ್ಲಾಧಿಕಾರಿ ಬೆದರಿಕೆ ಹಾಕುತ್ತಿದ್ದಾರೆ ಎನ್ನುವ ಆರೋಪದ ಬಗ್ಗೆ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಭಾನುವಾರ ಕಳವಳ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಹತ್ರಸ್ನಲ್ಲಿ ಸಾಮೂಹಿಕವಾಗಿ ಅತ್ಯಾಚಾರಕ್ಕೊಳಗಾಗಿ ಮೃತಪಟ್ಟ ಸಂತ್ರಸ್ತೆಯ ಕುಟುಂಬಕ್ಕೆ ಹತ್ರಸ್ನ ಜಿಲ್ಲಾಧಿಕಾರಿ ಬೆದರಿಕೆ ಹಾಕಿರುವ ಬಗ್ಗೆ ಗಂಭೀರವಾದ ಆರೋಪಗಳಿವೆ. ಆದರೂ ಕೂಡಾ ಯುಪಿ ಸರ್ಕಾರ ಯಾಕೆ ಮೌನಾಗಿದೆ. ಇದು ದುಃಖಕರ ಹಾಗೂ ಆತಂಕಕಾರಿಯಾಗಿದೆ ಎಂದು ತಿಳಿಸಿದ್ದಾರೆ.
ಪ್ರಕರಣದ ತನಿಖೆಯನ್ನು ಸರ್ಕಾರ ಸಿಬಿಐಗೆ ಒಪ್ಪಿಸಿದ್ದಾರೆ. ಜಿಲ್ಲಾಧಿಕಾರಿ ಹತ್ರಸ್ನಲ್ಲೇ ಇರುವ ಕಾರಣ ಈ ವಿಷಯದ ಬಗ್ಗೆ ನಿಷ್ಪಕ್ಷಪಾತವಾಗಿ ಹೇಗೆ ತನಿಖೆ ಮಾಡಬಹುದು? ಜನರು ಭಯಭೀತರಾಗಿದ್ದಾರೆ ಎಂದಿದ್ದಾರೆ.
ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಶನಿವಾರ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಿದ್ದು, ಸಾಂತ್ವಾನ ಹೇಳಿದ್ದರು. ಯುಪಿ ಸಿಎಂ ಕೂಡಾ ಶನಿವಾರ ಅತ್ಯಾಚಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿದ್ದರು.