ಬೆಂಗಳೂರು, ಅ. 04(DaijiworldNews/PY): ನಮ್ಮ ಪಕ್ಷದ ಸಿದ್ದಾಂತವನ್ನು ಒಪ್ಪಿಕೊಂಡು ಬಂದಲ್ಲಿ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೇವೆ. ಪಕ್ಷಕ್ಕಾಗಿ ಯಾರು ದುಡಿಯುತ್ತಾರೋ ಅಂತವರಿಗೆ ಸೂಕ್ತ ಸ್ಥಾನಸ್ಥಾನ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಇಡೀ ರಾಜ್ಯ ಇದೀಗ ಉಪಚುನಾವಣೆಯ ಫಲಿತಾಂಶಕ್ಕೆ ಎದುರು ನೋಡುತ್ತಿದೆ. ನಾವು ಹೊಸಬರು, ಹಳಬರು ಅಂತ ನೋಡುವುದಿಲ್ಲ. ಎಲ್ಲರನ್ನೂ ಕೂಡಾ ಸಂಘಟನೆಗೆ ಬಳಸಿಕೊಳ್ಳುತ್ತೇವೆ. ಸದ್ಯ ಪಕ್ಷಕ್ಕೆ ನೂರು ಮುಖಂಡರು ಸೇರ್ಪಡೆಗೊಂಡಿದ್ದಾರೆ. ಇನ್ನೂ ಕೂಡಾ ಸಾವಿರಾರು ಮಂದಿ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಾರೆ ಎಂದು ತಿಳಿಸಿದರು.
ಶಿರಾ, ರಾಜರಾಜೇಶ್ವರಿ ನಗರ ಹಾಗೂ ಶಿಕ್ಷಕರ ಕ್ಷೇತ್ರಕ್ಕೆ ಟಿಕೆಟ್ ಅಂತಿಮವಾಗುತ್ತದೆ. ಇಂದು ದೆಹಲಿಗೆ ಅಭ್ಯರ್ಥಿ ಪಟ್ಟಿಯನ್ನು ಶಿಫಾರಸು ಮಾಡುತ್ತೇವೆ. ಟಿಕೆಟ್ ನಾವು ನೀಡಲ್ಲ. ಬದಲಾಗಿ ಹೈಕಮಾಂಡ್ ಟಿಕೆಟ್ ಪ್ರಕಟಿಸುತ್ತದೆ ಎಂದರು.
ಉತ್ತರಪ್ರದೇಶದ ಅತ್ಯಾಚಾರ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ವಿಚಾರವಾಗಿ ದೇಶದ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಸೋಮವಾರ ಇದರ ವಿರುದ್ದ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.