ಲಖನೌ, ಅ. 04(DaijiworldNews/PY): ಹತ್ರಸ್ ಜಿಲ್ಲಾಧಿಕಾರಿಯನ್ನು ಶೀಘ್ರವೇ ವಜಾಗೊಳಿಸಬೇಕು. ಇಡಿ ಪ್ರಕರಣದಲ್ಲಿ ಅವರ ಪಾತ್ರವಿರುವ ಬಗ್ಗೆ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಒತ್ತಾಯಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸಂತ್ರಸ್ತೆಯ ಕುಟುಂಬದವರೊಂದಿಗೆ ಜಿಲ್ಲಾಧಿಕಾರಿ ಕೆಟ್ಟದಾಗಿ ನಡೆದುಕೊಂಡಿದ್ದಾರೆ ಎಂದು ಸಂತ್ರಸ್ತೆಯ ಕುಟುಂಬದವರು ತಿಳಿಸಿದ್ದಾರೆ. ಇಂತಹ ಅಧಿಕಾರಿಯನ್ನು ರಕ್ಷಿಸುತ್ತಿರುವವರು ಯಾರು? ಎಂದು ಕೇಳಿದ್ದಾರೆ.
ಈ ಪ್ರಕರಣವನ್ನು ಸಿಬಿಐ ಹಾಗೂ ಎಸ್ಐಟಿಗೆ ಏಕೆ ನೀಡುತ್ತಿದೆ. ಇದಕ್ಕೆ ಕಾರಣವೇನು? ಎಂದು ಕುಟುಂಬವ ನ್ಯಾಯಾಂಗ ತನಿಖೆಗೆ ಒತ್ತಾಯಿಸುತ್ತಿದೆ. ಯುಪಿ ಸರ್ಕಾರ ನಿದ್ರೆಯಿಂದ ಎಚ್ಚರಗೊಂಡು ಕುಟುಂಬದವರ ಸಮಸ್ಯೆಯನ್ನು ಕೇಳಬೇಕು ಎಂದು ಹೇಳಿದ್ದಾರೆ.