ಬೆಂಗಳೂರು, ಅ. 05(DaijiworldNews/PY): ಇಂದು ಬೆಳ್ಳಂಬೆಳಗ್ಗೆ ಡಿಕೆ ಸಹೋದರರ ಮನೆ ಮೇಲೆ ಸಿಬಿಐ ನಡೆಸಿರುವ ದಾಳಿಯನ್ನು ಖಂಡಿಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮನೆ ಮೇಲೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ನಡೆಸಿರುವ ಸಿಬಿಐ ದಾಳಿ ರಾಜಕೀಯ ದುಷ್ಟತನದ ಪರಮಾವಧಿ ಎಂದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರ ಮನೆ ಮೇಲೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ನಡೆಸಿರುವ ಸಿಬಿಐ ದಾಳಿ ರಾಜಕೀಯ ದುಷ್ಟತನದ ಪರಮಾವಧಿ. ಇದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಿಕ್ಕಾಗದ ಬಿಜೆಪಿ ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ" ಎಂದಿದ್ದಾರೆ.
ಸಿಬಿಐನ ಬೆಂಗಳೂರು ಘಟಕದ ಪೊಲೀಸರು ಇಂದು ಬೆಳಿಗ್ಗೆ ಆರು ಗಂಟೆಗೆ ದಾಳಿ ನಡೆಸಿದ್ದು, ಡಿ.ಕೆ ಸಹೊದರರಿಗೆ ಸೇರಿದ ಹಲವು ಕಡೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.