ಶ್ರೀನಗರ, ಅ. 05(DaijiworldNews/PY): ಸಿಆರ್ಪಿಎಫ್ ಸಿಬ್ಬಂದಿಗಳ ಮೇಲೆ ಸೋಮವಾರ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಸೋಮವಾರದಂದು ಸಿಆರ್ಪಿಎಫ್ ಸಿಬ್ಬಂದಿಗಳು ದಕ್ಷಿಣ ಕಾಶ್ಮೀರದ ಪಂಪೋರ್ನಲ್ಲಿ ಗಸ್ತು ತಿರುಗುತ್ತಿದ್ದ ಸಂದರ್ಭ ಉಗ್ರರು ದಾಳಿ ನಡೆಸಿದ್ದಾರೆ. ದಾಳಿಯ ಪರಿಣಾಮ ಐವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಈ ಪೈಕಿ ಇಬ್ಬರು ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
ಘಟನಾ ಸ್ಥಳದಲ್ಲಿ ಭದ್ರತಾ ಸಿಬ್ಬಂದಿ ಶೋಧ ಕಾರ್ಯ ಕೈಗೊಂಡಿದ್ದಾರೆ.