ಬೆಂಗಳೂರು, ಅ. 05 (DaijiworldNews/PY) : ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಕಡೆಯಿಂದ ಬಂದ ಇಂತಹ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಾಗಲಿ ಮತ್ತು ಕುಗ್ಗುವುದಾಗಲಿ ದೂರದ ಮಾತು. ರಾಜಕೀಯವನ್ನು ರಾಜಕೀಯವಾಗಿ ಎದುರಿಸಲು ನಾವು ಸದಾ ಸಿದ್ದರಿದ್ದೇವೆ ಎಂದು ಸಂಸದ ಡಿ. ಕೆ. ಸುರೇಶ್ ಹೇಳಿದ್ದಾರೆ.
ಸಿಬಿಐ ದಾಳಿ ಬಳಿಕ ಟ್ವೀಟ್ ಮಾಡಿರುವ ಅವರು, ಇಂದು ಮುಂಜಾನೆಯ ವೇಳೆಗೆ ನಮ್ಮ ಮನೆಯ ಮೇಲೆ ಸಿಬಿಐ ದಾಳಿ ನಡೆದಿದೆ. ಕಾನೂನಿನ ಚೌಕಟ್ಟಿನಲ್ಲಿ ಅಧಿಕಾರಿಗಳಿಗೆ ಎಲ್ಲಾ ರೀತಿಯಲ್ಲೂ ನಮ್ಮ ಕಡೆಯಿಂದ ಸಂಪೂರ್ಣವಾದ ಸ್ಪಂದನೆ ಸಿಕ್ಕಿದೆ. ಮುಂದೆಯೂ ಸಹ ಸಿಗಲಿದೆ ಎಂದಿದ್ದಾರೆ.
ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಕಡೆಯಿಂದ ಬಂದ ಇಂತಹ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಾಗಲಿ ಮತ್ತು ಕುಗ್ಗುವುದಾಗಲಿ ದೂರದ ಮಾತು. ರಾಜಕೀಯವನ್ನು ರಾಜಕೀಯವಾಗಿ ಎದುರಿಸಲು ನಾವು ಸದಾ ಸಿದ್ದರಿದ್ದೇವೆ. ಈ ವಿಚಾರದಲ್ಲಿ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರು ಧೃತಿಗೆಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ.
ಈ ಎಲ್ಲಾ ರಾಜಕೀಯ ಷಡ್ಯಂತ್ರಗಳನ್ನು ಎದುರಿಸಿ ಜಯಿಸಿ ಬರುವ ಶಕ್ತಿಯನ್ನು ಆ ದೇವರು ನಮಗೆ ಕರುಣಿಸಿದ್ದಾನೆ. ಹಾಗಾಗಿ ಅಭಿಮಾನಿಗಳು ವಿಚಲಿತರಾಗುವುದು ಬೇಡ. ನಿಮ್ಮ ಆಶೀರ್ವಾದ ಹಾರೈಕೆ ಸದಾ ಹೀಗೇ ಇರಲಿ ಎಂದಿದ್ದಾರೆ.