ಶಿವಮೊಗ್ಗ, ಅ.5 (DaijiworldNews/HR): ಡಿ ಕೆ ಶಿವಕುಮಾರ್ ಅವರ ಮನೆಗೆ ಸಿಬಿಐ ದಾಳಿ ನಡೆಸಿರುವುದು ರಾಜಕೀಯ ಪ್ರೇರಿತ ಎಂದು ಆರೋಪಿಸಿರುವ ಎನ್ಎಸ್ಯುಐ ಕಾರ್ಯಕರ್ತರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರ ಶಿವಮೊಗ್ಗದ ವಿನೊಬನಗರದಲ್ಲಿರುವ ನಿವಾಸದ ಮುಂದೆ ಎನ್ಎಸ್ಯುಐ ಕಾರ್ಯಕರ್ತರು ಜಮಾಯಿಸಿದ ಧಿಕ್ಕಾರ ಕೂಗುತ್ತಾ ಮನೆಗೆ ಮುತ್ತಿಗೆ ಹಾಕಲು ಯತ್ನಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು 20 ಕ್ಕೂ ಹೆಚ್ಚು ಎನ್ಎಸ್ಯುಐ ಕಾರ್ಯಕರ್ತರಿಂದ ಕಪ್ಪುಪಟ್ಟಿ ಧರಿಸಿ ಮುತ್ತಿಗೆ ಯತ್ನ ನಡೆಸಿದ್ದು, ಆದರೆ ಮೊದಲೇ ಮಾಹಿತಿ ಪಡೆದಿದ್ದ ಪೊಲೀಸರು ಮುತ್ತಿಗೆ ಹಾಕಲು ಯತ್ನಿಸಿದವರನ್ನು ತಡೆದು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.