ಬೆಂಗಳೂರು, ಅ. 05 (DaijiworldNews/SM): ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂಬುವುದಾಗಿ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಸಚಿವರಲ್ಲಿ ಕೋವಿಡ್-19 ಸೋಂಕು ಧೃಢ ಪಟ್ಟಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಇನ್ನು ಕೆಲವು ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿ ಉಳಿಯಲಿದ್ದಾರೆ. ಪ್ರಸ್ತುತ ಅವರಲ್ಲಿ ಯಾವುದೇ ರೀತಿಯ ಲಕ್ಷಣಗಳು ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಯಾವುದೇ ಆತಂಕವಿಲ್ಲ ಎಂದು ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.