ಜಮ್ಮು, ಅ. 06 (DaijiworldNews/MB) : ಸೋಮವಾರ ಪಾಕಿಸ್ತಾನ ಪಡೆಗಳು ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್ನ ಬಾಬಖೋರಿಯ ಗಡಿ ನಿಯಂತ್ರಣಾ ರೇಖೆಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು ಭಾರತೀಯ ಸೇನೆಯ ಓರ್ವ ಕಿರಿಯ ಸೇನಾಧಿಕಾರಿ(ಜೆಸಿಒ) ಹುತಾತ್ಮರಾಗಿದ್ದಾರೆ.
ಪಾಕ್ ಪಡೆಯ ಅಪ್ರಚೋದಿತ ಗುಂಡಿನ ದಾಳಿಯಿಂದಾಗಿ ಭಾರತೀಯ ಸೇನೆಯ ಓರ್ವ ಜೆಸಿಓ ತೀವ್ರವಾಗಿ ಗಾಯಗೊಂಡಿದ್ದು ಬಳಿಕ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ.
ಇನ್ನು ಪಾಕ್ನ ಗುಂಡಿನ ದಾಳಿಗೆ ಭಾರತೀಯ ಸೇನೆಯೂ ಕೂಡಾ ಗುಂಡಿನ ಮೂಲಕವೇ ಪ್ರತ್ಯುತ್ತರ ನೀಡಿದೆ ಎಂದು ತಿಳಿದು ಬಂದಿದೆ.
ಸೋಮವಾರ ಸಿಆರ್ಪಿಎಫ್ ಸಿಬ್ಬಂದಿಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಮೂವರು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.