ರಾಮನಗರ, ಅ. 06 (DaijiworldNews/MB) : ಇತ್ತೀಚೆಗೆ ನಿಧನರಾದ ಮಾಜಿ ಡಾನ್ ಮುತ್ತಪ್ಪ ರೈ ಅವರ ಸದಾಶಿವನಗರ ಮತ್ತು ಬಿಡದಿಯಲ್ಲಿರುವ ನಿವಾಸದ ಮೇಲೆ ಸಿಸಿಬಿ ಅಧಿಕಾರಿಗಳು ಮಂಗಳವಾರ ಮುಂಜಾನೆ ದಾಳಿ ನಡೆಸಿದ್ದಾರೆ ಎಂದು ವರದಿ ತಿಳಿಸಿದೆ.
ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಡ್ರಗ್ಸ್ ಪೆಡ್ಲರ್ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಮಂಗಳವಾರ ಮುಂಜಾನೆ ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಡ್ರಗ್ ಪೆಡ್ಲರ್ ನೀಡಿದ ಮಾಹಿತಿ ಆಧರಿಸಿ ಈ ದಾಳಿಯನ್ನು ಎಸಿಪಿ ವೇಣುಗೋಪಾಲ್ ನೇತೃತ್ವದಲ್ಲಿ ನಡೆಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇನ್ನು ಮುತ್ತಪ್ಪ ರೈ ಅವರ ಸದಾಶಿವನಗರ ಮತ್ತು ಬಿಡದಿಯಲ್ಲಿರುವ ಎರಡೂ ಮನೆಗಳಿಗೆ ಏಕಕಾಲದಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.