ರಾಂಚಿ, ಅ. 06 (DaijiworldNews/MB) : 1999 ರ ಕಲ್ಲಿದ್ದಲು ಹಗರಣ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರದ ಮಾಜಿ ಸಚಿವ ದಿಲೀಪ್ ರೇ ಅವರನ್ನು ಮಂಗಳವಾರ ವಿಶೇಷ ನ್ಯಾಯಾಲಯವು ಅಪರಾಧಿ ಎಂದು ಘೋಷಿಸಿದೆ.
ಅಟಲ್ ಬಿಹಾರಿ ವಾಜಪೇಯಿಯವರ ಸರ್ಕಾರದಲ್ಲಿ ರಾಜ್ಯ ಸಚಿವ (ಕಲ್ಲಿದ್ದಲು) ಆಗಿ ಸೇವೆ ಸಲ್ಲಿಸಿದ್ದ ದಿಲೀಪ್ ರೇ ಅವರ ವಿರುದ್ದ 1999 ರಲ್ಲಿ ಜಾರ್ಖಂಡ್ ಕಲ್ಲಿದ್ದಲು ಬ್ಲಾಕ್ ಹಂಚಿಕೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿ ಕಲ್ಲಿದ್ದಲು ಹಗರಣದ ಆರೋಪವಿತ್ತು. ಮಂಗಳವಾರ ವಿಶೇಷ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಭರತ್ ಪರಾಶರ್ ಅವರು ಈ ಪ್ರಕರಣಕ್ಕೆ ಸಂಬಂಧಿಸಿ ತೀರ್ಪು ನೀಡಿದ್ದು ದಿಲೀಪ್ ರೇ, ಆ ಸಂದರ್ಭದಲ್ಲಿ ಕಲ್ಲಿದ್ದಲು ಸಚಿವಾಲಯದ ಇಬ್ಬರು ಹಿರಿಯ ಅಧಿಕಾರಿಗಳಾಗಿದ್ದ ಪ್ರದೀಪ್ ಕುಮಾರ್ ಬ್ಯಾನರ್ಜಿ ಮತ್ತು ನಿತ್ಯಾನಂದ್ ಗೌತಮ್, ಕ್ಯಾಸ್ಟ್ರಾನ್ ಟೆಕ್ನಾಲಜೀಸ್ ಲಿಮಿಟೆಡ್ (ಸಿಟಿಎಲ್), ಅದರ ನಿರ್ದೇಶಕ ಮಹೇಂದ್ರ ಕುಮಾರ್ ಅಗರ್ವಾಲ್ ಮತ್ತು ಕ್ಯಾಸ್ಟ್ರಾನ್ ಮೈನಿಂಗ್ ಲಿಮಿಟೆಡ್ (ಸಿಎಮ್ಎಲ್) ಗೆ ಅವರನ್ನು ಕೂಡಾ ಅಪರಾಧಿಗಳೆದು ಘೋಷಿಸಿದ್ದಾರೆ.
ಇನ್ನು ಅಪರಾಧಕ್ಕೆ ಸಂಬಂಧಿಸಿದ ಶಿಕ್ಷೆಯ ಪ್ರಮಾಣವನ್ನು ಅಕ್ಟೋಬರ್ 14 ರಂದು ನ್ಯಾಯಾಲಯವು ಘೋಷಿಸಲಿದೆ.