ಮೀರತ್, ಅ. 06 (DaijiworldNews/HR): 15 ವರ್ಷದ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಮಾಡಿ ಅದರ ವಿಡಿಯೋ ಚಿತ್ರೀಕರಣ ಮಾಡಿದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.
ಈ ಘಟನೆಯ ಕುರಿತು ಮೀರತ್ನ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ .
ಎಫ್ಐಆರ್ ಪ್ರಕಾರ, ಆರೋಪಿಗಳ ಪೈಕಿ ಒರ್ವ, ಬಾಲಕಿಯ ಸಂಬಂಧಿಯಾಗಿದ್ದು ಆತ ಬಾಲಕಿಯನ್ನು ಕರೆದೊಯ್ದು ಆಕೆಗೆ ನಿದ್ರೆ ಮಾತ್ರೆಗಳನ್ನು ನೀಡಿ ಅತ್ಯಾಚಾರ ಮಾಡಿ, ಈ ಕೃತ್ಯವನ್ನು ಚಿತ್ರೀಕರಿಸಿದ್ದಾನೆ ಎಂದು ಎಎಸ್ಪಿ ಸೂರಜ್ ರಾಯ್ ತಿಳಿಸಿದ್ದಾರೆ.
ಇನ್ನು ಈ ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಸೂರಜ್ ರಾಯ್ ಹೇಳಿದ್ದಾರೆ.