ಕೇರಳ,ಅ. 06 (DaijiworldNews/HR): ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನ ಪ್ರವೇಶಿಸಲು ಭಕ್ತರಿಗೆ ಕೊರೊನಾ ನೆಗಟಿವ್ ಪ್ರಮಾಣ ಪತ್ರ ಕಡ್ಡಾಯ ಮಾಡಬೇಕು ಎಂದು ತಜ್ಞರ ಸಮಿತಿ ಕೇರಳ ಸರ್ಕಾರಕ್ಕೆ ಶಿಫಾರಸು ಮಾಡಿದೆ.
ಎರಡು ತಿಂಗಳ ವಾರ್ಷಿಕ ಮಂಡಲ ಪೂಜೆ ಮಹೋತ್ಸವ ಮತ್ತು ಮಕರವಿಳಕ್ಕು ಉತ್ಸವ ನ. 16ರಿಂದ ಆರಂಭವಾಗಲಿದ್ದು, ದೇವಾಲಯ ತೆರೆದ ನಂತರ ಅನುಸರಿಸಬೇಕಾದ ಮಾರ್ಗಸೂಚಿಗಳ ಕುರಿತು ತಜ್ಞರ ಸಮಿತಿ ಸರ್ಕಾರಕ್ಕೆ ವರದಿ ನೀಡಿದ್ದು, ಅದರಲ್ಲಿ ಕೋವಿಡ್-19 ನೆಗಟಿವ್ ವರದಿ ಕಡ್ಡಾಯಗೊಳಿಸುವಂತೆಯೂ ಶಿಫಾರಸು ಮಾಡಲಾಗಿದೆ.
ಶಿಫಾರಸುಗಳನ್ನು ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಚಿವ ಕಡಕಂಪಲ್ಲಿ ಸುರೇಂದ್ರನ್ ತಿಳಿಸಿದ್ದಾರೆ
ಇನ್ನು24 ಗಂಟೆಯೊಳಗೆ ಕೊರೊನಾ ಪರೀಕ್ಷೆ ನಡೆಸಿದ ಪ್ರಮಾಣ ಪತ್ರ ಹಾಜರು ಪಡಿಸಬೇಕು ಮತ್ತು 60 ವರ್ಷ ಮೇಲ್ಪಟ್ಟ ಹಾಗೂ ಯಾವುದೇ ಗಂಭೀರ ಕಾಯಿಲೆ ಇರುವವರಿಗೆ ಪ್ರವೇಶ ನೀಡಬಾರದು ಎಂದು ಸಮಿತಿ ಹೇಳಿದೆ.