ಮುಂಬೈ, ಅ. 07 (DaijiworldNews/MB) : ಡ್ರಗ್ ಜಾಲದ ನಂಟು ಆರೋಪದಲ್ಲಿ ಕಳೆದ ತಿಂಗಳು ಬಂಧನವಾಗಿರುವ ನಟಿ ರಿಯಾ ಚಕ್ರವರ್ತಿಗೆ ಕೊನೆಗೂ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆದರೆ ರಿಯಾ ಚಕ್ರವರ್ತಿ ಸಹೋದರ ಶೋಯಿಕ್ ಅವರಿಗೆ ಜಾಮೀನು ನೀಡಲು ಬಾಂಬೆ ಹೈಕೋರ್ಟ್ ನಿರಾಕರಿಸಿದೆ.
ಇನ್ನು ಈ ಪ್ರಕರಣದ ಇತರೆ ಆರೋಪಿಗಳಾದ ದೀಪೇಶ್ ಸಾವಂತ್ ಮತ್ತು ಸ್ಯಾಮ್ಯುಯೆಲ್ ಮಿರಾಂಡಾ ಅವರಿಗೂ ಜಾಮೀನು ದೊರೆತಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಿಯಾ ಪರ ವಕೀಲ ಸತೀಶ್ ಮನೇಶಿಂದೆ ಅವರು, ನಮಗೆ ಬಾಂಬೆ ಹೈಕೋರ್ಟ್ನ ಆದೇಶದಿಂದ ಸಂತಸವಾಗಿದೆ. ಸತ್ಯ ಮತ್ತು ನ್ಯಾಯದ ಪರ ಈ ತೀರ್ಪಾಗಿದೆ. ರಿಯಾಳ ಬಂಧನವು ಕಾನೂನಿನ ವ್ಯಾಪ್ತಿಯನ್ನು ಮೀರಿತ್ತು. ರಿಯಾ ವಿರುದ್ದ ನಡೆಯುತ್ತಿರುವ ಅನಗತ್ಯ ವಿಚಾರಣಗಳು ಅಂತ್ಯವಾಗಬೇಕು ಎಂದು ಹೇಳಿದ್ದಾರೆ.
ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಡ್ರಗ್ಸ್ ವಿಚಾರಕ್ಕೆ ಸಂಬಂಧಿಸಿ ನಟಿ ರಿಯಾ ಚಕ್ರವರ್ತಿ ಹಾಗೂ ಆಕೆಯ ಸಹೋದರನನ್ನು ಬಂಧಿಸಲಾಗಿತ್ತು.