ಮೈಸೂರು,ಅ.07 (DaijiworldNews/HR): ಸರ್ಕಾರ ಶಾಲಾಕಾಲೇಜುಗಳ ಆರಂಭದ ವಿಚಾರದಲ್ಲಿ ಆತುರತೆ ತೋರುವುದಿಲ್ಲ ನಮಗೆ ವಿದ್ಯಾರ್ಥಿಗಳು ಹಾಗೂ ಪೋಷಕರ ಹಿತ ಮುಖ್ಯವಾಗಿದೆ ಎಂಬುದಾಗಿ ಆರೋಗ್ಯ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಶಾಲಾಕಾಲೇಜುಗಳ ಆರಂಭದ ವಿಚಾರದಲ್ಲಿ ತಜ್ಞರ ಸಮಿತಿಯೊಂದನ್ನು ರಚಿಸಲಾಗಿದ್ದು, ಅದರಂತೆ ಒಂದು ವಾರದೊಳಗೆ ವರದಿ ನೀಡುವಂತೆ ತಜ್ಞರ ಸಮಿತಿಗೆ ಸೂಚಿಸಲಾಗಿದೆ. ತಜ್ಞರ ಸಮಿತಿ ನೀಡುವ ವರದಿ ಅಧರಿಸಿ ಶಾಲಾ ಕಾಲೇಜುಗಳ ಆರಂಭದ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಸಂಬಂಧ 16 ರಾಜ್ಯಗಳು ಹೆಚ್ಚಿನ ನಿಗಾ ವಹಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೂಚಿಸಿದ್ದು, ಕರ್ನಾಟಕದಲ್ಲಿ ಬೆಂಗಳೂರು ಮತ್ತು ಮೈಸೂರಿನಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಪ್ರಧಾನಿಗಳು ಸಲಹೆ ನೀಡಿದ್ದಾರೆ ಎಂದರು.