ಬೆಂಗಳೂರು, ಅ. 07 (DaijiworldNews/MB) : ರಾಜ್ಯದ ಶಿರಾ ಹಾಗೂ ಆರ್.ಆರ್.ನಗರ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗೆ ಕಾಂಗ್ರೆಸ್ ಬುಧವಾರ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಆರ್.ಆರ್. ನಗರಕ್ಕೆ ಡಿ.ಕೆ.ರವಿ ಪತ್ನಿ ಎಚ್.ಕುಸುಮ ಮತ್ತು ಶಿರಾ ಕ್ಷೇತ್ರಕ್ಕೆ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರ ಹೆಸರನ್ನು ಆಯ್ಕೆ ಮಾಡಿ ಎಐಸಿಸಿ ಪ್ರಕಟಿಸಿದೆ.
ಕೆಲ ದಿನಗಳ ಹಿಂದಷ್ಟೇ ಕುಸುಮಾ ಅವರು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದು ಮುನಿರತ್ನ ಅವರ ರಾಜೀನಾಮೆ ಬಳಿಕ ತೆರವಾಗಿದ್ದ ಆರ್ ಆರ್ ನಗರ ಕ್ಷೇತ್ರಕ್ಕೆ ಕುಸುಮಾ ಅವರ ಹೆಸರನ್ನು ಎಐಸಿಸಿ ಚುನಾವಣಾ ಸಮಿತಿ ಬುಧವಾರ ಅಧಿಕೃತವಾಗಿ ಆಯ್ಕೆ ಮಾಡಿದೆ.
ನವೆಂಬರ್ 3 ರಂದು ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ.