ಬೆಂಗಳೂರು, ಅ. 08 (DaijiworldNews/MB) : ದಕ್ಷಿಣ ಭಾರತದ ನಾಲ್ಕು ರಾಜ್ಯಗಳ ಉಸ್ತುವಾರಿ ವಹಿಸಿಕೊಳ್ಳುವಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರಿಗೆ ಹೈಕಮಾಂಡ್ ಸೂಚಿಸಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಿ.ಟಿ. ರವಿ ಅವರು ಭಾಗವಹಿಸಿದ್ದು ಸಭೆಯಲ್ಲಿ ಸಿ.ಟಿ. ರವಿ ಅವರು ದಕ್ಷಿಣ ಭಾರತದ ರಾಜ್ಯಗಳ ಉಸ್ತುವಾರಿ ವಹಿಸುವಂತೆ ತಿಳಿಸಲಾಗಿದೆ.
ರವಿ ಅವರು, ಕರ್ನಾಟಕ, ತೆಲಂಗಾಣ, ತಮಿಳುನಾಡು, ಮತ್ತು ಆಂಧ್ರಪ್ರದೇಶದ ಉಸ್ತುವಾರಿ ವಹಿಸಲಿದ್ದಾರೆ. ಹಾಗೆಯೇ ಕೇಂದ್ರಾಡಳಿತ ಪ್ರದೇಶಗಳಾದ ಪುದುಚೇರಿ ಮತ್ತು ಲಕ್ಷದ್ವೀಪಗಳ ಉಸ್ತುವಾರಿಯನ್ನು ವಹಿಸಲಿದ್ದಾರೆ.
ಇದು ಕೇವಲ ತಾತ್ಕಾಲಿಕ ಉಸ್ತುವಾರಿಯಾಗಿದ್ದು ಬಿಹಾರ ಮತದಾನ ಮುಗಿದ ನಂತರ ಬಿಜೆಪಿ ರಾಷ್ಟ್ರೀಯ ಘಟಕದ ಸದಸ್ಯರಿಗೆ ನಿರ್ದಿಷ್ಟ ಜವಾಬ್ದಾರಿಗಳನ್ನು ನೀಡಲಾಗುವುದು ಎಂದು ಹೇಳಲಾಗಿದೆ.