ರಾಂಚಿ, ಅ.09 (DaijiworldNews/HR): ಆರ್ಜೆಡಿ ಪಕ್ಷದ ನಾಯಕ ಲಾಲು ಪ್ರಸಾದ್ ಯಾದವವ್ಗೆ ಬಹುಕೋಟಿ ಮೇವು ಹಗರಣದ ಚಾಯಿಬಾಸಾ ಅವ್ಯವಹಾರ ಪ್ರಕರಣದಲ್ಲಿ ಜಾರ್ಖಂಡ್ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಲಾಲು ಪ್ರಸಾದ್ ಹಲವು ಪ್ರಕರಣಗಳಲ್ಲಿ ದೋಷಿಯಾಗಿದ್ದಾರೆ. ಆದರೆ ದುಮ್ಕಾ ಖಜಾನೆ ಪ್ರಕರಣದ ವಿಚಾರಣೆ ಇನ್ನೂ ಬಾಕಿ ಇರುವುದರಿಂದ ಅವರು ಜೈಲಿನಲ್ಲಿಯೇ ಇರಲಿದ್ದಾರೆ ಎಂದು ತಿಳಿದು ಬಂದಿದೆ.
ಚಾಯಿಬಾಸಾ ಖಜಾನೆಯಿಂದ 33.67 ಕೋಟಿ ಹಣವನ್ನು ಅಕ್ರಮವಾಗಿ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಜನತಾ ದಳದ ಲಾಲು ಪ್ರಸಾದ್ ಸೇರಿ ಒಟ್ಟು 16 ಮಂದಿಗೆ ಜೈಲು ಶಿಕ್ಷೆ ವಿಧಿಸಲಾಗಿತ್ತು.
ಇನ್ನುಲಾಲು ಅನಾರೋಗ್ಯ ಕಾರಣದಿಂದಾಗಿ ರಾಂಚಿಯಲ್ಲಿರುವ ರಾಜೇಂದ್ರ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆಯಲ್ಲಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.