ನವದೆಹಲಿ,ಅ.09 (DaijiworldNews/HR): ರೈಲ್ವೆ ಸಚಿವ ಪಿಯುಷ್ ಗೋಯಲ್ ಅವರಿಗೆ ಎಲ್ಜೆಪಿ ನಾಯಕ ದಿವಂಗತ ರಾಮ್ವಿಲಾಸ್ ಪಾಸ್ವಾನ್ ನಿರ್ವಹಿಸುತ್ತಿದ್ದ ಆಹಾರ ಮತ್ತು ನಾಗರಿಕ ಪೂರೈಕೆ, ಗ್ರಾಹಕ ವ್ಯವಹಾರಗಳ ಖಾತೆಯ ಜವಾಬ್ದಾರಿಯನ್ನು ನೀಡಲಾಗಿದೆ.
ಪಿಯುಷ್ ಗೋಯಲ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆ ಮೇರೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಈಗಿರುವ ಜವಾಬ್ದಾರಿ ಜೊತೆಗೆ ಹೆಚ್ಚುವರಿಯಾಗಿ ಈ ಖಾತೆಯ ಜವಾಬ್ದಾರಿ ನೀಡಲು ನಿರ್ದೇಶಿಸಿದ್ದಾರೆ ಎಂಬುದಾಗಿ ರಾಷ್ಟ್ರಪತಿ ಭವನದ ಪ್ರಕಟಣೆ ಮಾಹಿತಿ ನೀಡಿದೆ.
ಇನ್ನು ರಾಮ್ವಿಲಾಸ್ ಪಾಸ್ವಾನ್(74) ಅವರು ಬಿಜೆಪಿ ನೇತೃತ್ವದ ಎನ್ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದು, ಗುರುವಾರ ನಿಧನರಾಗಿದ್ದರು.