ಬೆಂಗಳೂರು,ಅ.09 (DaijiworldNews/HR): ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿಯವರ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆಯಾಗಿದೆ.
ನಟಿಯರಾದ ರಾಗಿಣಿ ಮತ್ತು ಸಂಜನಾರ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 23ರವರೆಗೆ ವಿಸ್ತರಿಸಿ ಡಿಪಿಎಸ್ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಇನ್ನು ಅಕ್ಟೋಬರ್ 10 ರಂದು ಸಂಜನಾ ಗಲ್ರಾನಿ ಅವರ ಹುಟ್ಟುಹಬ್ಬವಿದ್ದು, ಆಕೆ ಈ ಬಾರಿ ಜೈಲಿನಲ್ಲೇ ಹುಟ್ಟುಹಬ್ಬವನ್ನು ಆಚರಿಸುವ ಸ್ಥಿತಿ ಎದುರಾಗಿದೆ.