ಕುಲ್ಗಾಂ, ಅ. 10 (DaijiworldNews/HR) : ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ನಡೆದಿದೆ.
ಸಾಂಧರ್ಭಿಕ ಚಿತ್ರ
ಉಗ್ರರು ಕುಲ್ಗಾಂ ಜಿಲ್ಲೆಯ ಚಿಂಗಾಮ್ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಓಡಾಟಗಳು ಕಂಡು ಬಂದ ಹಿನ್ನೆಲೆಯಲ್ಲಿ ಭಾರತೀಯ ಸೇನಾಪಡೆ ಕಾರ್ಯಾಚರ ನಡೆಸಿತ್ತು.
ಕಾರ್ಯಚರಣೆಯ ವೇಳೆ ಉಗ್ರರು ಭದ್ರತಾಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಸೇನಾಪಡೆ ಕಾರ್ಯಚರಣೆಯನ್ನು ಎನ್ಕೌಂಟರ್ ಆಗಿ ಮಾರ್ಪಡಿಸಿದ್ದು, ಇದೀಗ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದುತಿಳಿದು ಬಂದಿದೆ.