ತುಮಕೂರು ಅ. 10 (DaijiworldNews/HR) : ಕೃಷಿ ಮಸೂದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಗುರಿಯಾಗಿಸಿಕೊಂಡು ಆರೋಪಿಸಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ತುಮಕೂರು ನ್ಯಾಯಾಲಯ ರಾಜ್ಯ ಪೊಲೀಸರಿಗೆ ನಿರ್ದೇಶನ ನೀಡಿದೆ.
ವಕೀಲ ಎಲ್.ರಮೇಶ್ ನಾಯಕ್ ಅವರ ದೂರಿನ ಆಧಾರದ ಮೇಲೆ, ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಪ್ರಥಮ ದರ್ಜೆ ನ್ಯಾಯಾಲಯವು ನಟಿಯ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕ್ಯಾತಸಂದ್ರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ಗೆ ನಿರ್ದೇಶನ ನೀಡಿತು.
ಸಿಆರ್ಪಿಸಿಯ ಸೆಕ್ಷನ್ 156 (3) ರ ಅಡಿಯಲ್ಲಿ ದೂರುದಾರರು ಅರ್ಜಿ ಸಲ್ಲಿಸಿದ್ದಾರೆ ಎಂದು ನ್ಯಾಯಾಲಯ ತಿಳಿಸಿದೆ.
ಸೆಪ್ಟೆಂಬರ್ 21 ರಂದು ಕಂಗಣೇ ತನ್ನ ಟ್ವೀಟರ್ ನಲ್ಲಿ ಗಲಭೆಗೆ ಕಾರಣವಾದ ಸಿಎಎ ಬಗ್ಗೆ ತಪ್ಪು ಮಾಹಿತಿ ಮತ್ತು ವದಂತಿಗಳನ್ನು ಹರಡಿದ ಜನರು ಈಗ ರೈತರ ಮಸೂದೆಯ ಬಗ್ಗೆ ತಪ್ಪು ಮಾಹಿತಿ ಹರಡುತ್ತಿದ್ದಾರೆ ಮತ್ತು ರಾಷ್ಟ್ರದಲ್ಲಿ ಭಯೋತ್ಪಾದನೆಯನ್ನು ಉಂಟುಮಾಡುತ್ತಿದ್ದಾರೆ, ಅವರು ಭಯೋತ್ಪಾದಕರು ಎಂದು ಟ್ವೀಟ್ ಮಾಡಿದ್ದರು.
ಈ ಟ್ವೀಟ್ನಿಂದಾಗಿ ವಕೀಲ ಎಲ್.ರಮೇಶ್ ನಾಯಕ್ ರಣಾವತ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.