ನವದೆಹಲಿ, ಅ. 10(DaijiworldNews/PY): ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾಲ್ ಅವರ ಅಂತ್ಯಕ್ರಿಯೆ ಶನಿವಾರ ಬಿಹಾರದ ಪಾಟ್ನಾದಲ್ಲಿ ನಡೆಯಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಈ ಬಗ್ಗೆ ಶುಕ್ರವಾರ ಕೇಂದ್ರ ಸಂಪುಟ ತೀರ್ಮಾನಿಸಿದ್ದು, ಸಕಲ ಸಕಾರಿ ಗೌರವಗಳ ಮೂಲಕ ರಾಮ್ ವಿಲಾಸ್ ಪಾಸ್ವಾನ್ ಅವರಿಗೆ ವಿದಾಯ ಹೇಳಲು ತೀರ್ಮಾನಿಸಿದೆ.
ರೈಲ್ವೆ ಸಚಿವ ಪಿಯುಷ್ ಗೋಯಲ್ ಅವರಿಗೆ ಎಲ್ಜೆಪಿ ನಾಯಕ ದಿವಂಗತ ರಾಮ್ವಿಲಾಸ್ ಪಾಸ್ವಾನ್ ನಿರ್ವಹಿಸುತ್ತಿದ್ದ ಆಹಾರ ಮತ್ತು ನಾಗರಿಕ ಪೂರೈಕೆ, ಗ್ರಾಹಕ ವ್ಯವಹಾರಗಳ ಖಾತೆಯ ಜವಾಬ್ದಾರಿಯನ್ನು ನೀಡಲಾಗಿದೆ ಎಂದು ರಾಷ್ಟ್ರಪತಿ ಭವನ ತಿಳಿಸಿದೆ.